HomeLatest Newsಗ್ರಾಮೀಣ ಪ್ರದೇಶದ ಇ-ಖಾತಾ ಸಮಸ್ಯೆಗೆ 20 ದಿನದಲ್ಲಿ ಪರಿಹಾರ: ಪ್ರಿಯಾಂಕ್ ಖರ್ಗೆ

ಗ್ರಾಮೀಣ ಪ್ರದೇಶದ ಇ-ಖಾತಾ ಸಮಸ್ಯೆಗೆ 20 ದಿನದಲ್ಲಿ ಪರಿಹಾರ: ಪ್ರಿಯಾಂಕ್ ಖರ್ಗೆ

ಬೆಂಗಳೂರು(ವಿಧಾನಸಭೆ): ಗ್ರಾಮೀಣ ಪ್ರದೇಶದಲ್ಲಿ ಆಸ್ತಿಗಳಿಗೆ ಇ-ಖಾತಾ ಸಮಸ್ಯೆ ಉಂಟಾಗಿದ್ದು, 15- 20 ದಿನಗಳಲ್ಲಿ ಸಮಸ್ಯೆ ಬಗೆಹರಿಸಿ ಇ-ಖಾತಾ ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯು ಗ್ರಾಮೀಣ ಭಾಗದ ಆಸ್ತಿಗಳನ್ನು ಡಿಜಿಟಲೀಕರಣ ಮಾಡಿ ಸಾರ್ವಜನಿಕರಿಗೆ ಸುಲಭವಾಗಿ ಇ-ಖಾತಾ ಸೌಲಭ್ಯ ದೊರಕುವಂತೆ ಮಾಡಬೇಕು ಎಂಬ ಉದ್ದೇಶದಿಂದ ಇ-ಸ್ವತ್ತು ಅಭಿಯಾನದಡಿ ಇ-ಸ್ವತ್ತು ತಂತ್ರಾಂಶ 2.0 ಅನ್ನು ಆರಂಭಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನೂತನ ಇ-ಸ್ವತ್ತು ತಂತ್ರಾಂಶ 2.0 ಅನ್ನು ಕಳೆದ ಡಿಸೆಂಬರ್ ನಲ್ಲಿ ಪ್ರಾರಂಭಿಸಲಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ ಇ-ಸ್ವತ್ತು ತಂತ್ರಾಂಶ 1.0 &  2.0 ನಲ್ಲಿ 44,508 ಅರ್ಜಿಗಳ ಸ್ವೀಕೃತ  ಮಾಡಲಾಗಿದೆ. ಅದರಲ್ಲಿ 7,978 ಅರ್ಜಿಗಳನ್ನು ಅನುಮೋದನೆ ಮಾಡಲಾಗಿದೆ. ಈ ತಂತ್ರಾಂಶದಲ್ಲಿ ಲೋಪಗಳನ್ನು ಬರುತ್ತಿದ್ದು, ಶೀಘ್ರದಲ್ಲಿಯೇ ಸರಿಪಡಿಸಲಾಗುವುದು.

ನಾವು ಯಾವುದೇ ತಂತ್ರಾಂಶವನ್ನು ಅನುಷ್ಠಾನಕ್ಕೆ ತರಬೇಕು ಎಂದರೆ ಅದಕ್ಕಾಗಿ ನಾವು  ಕೇಂದ್ರ ಸರ್ಕಾರದ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) ತಂಡಕ್ಕೆ ಮನವಿ ಮಾಡಬೇಕು. ಈ  ತಂತ್ರಾಂಶದ ಲೋಪವನ್ನು ಸರಿಪಡಿಸಲು, ನಾವು ಅನುದಾನ ಬಿಡುಗಡೆ  ಮಾಡಿದ್ದೇವೆ. ಹೆಚ್ಚಿನ ಮಾನವ ಸಂಪನ್ಮೂಲವನ್ನು ಒದಗಿಸಿದ್ದೇವೆ. ಆದರೆ ಕೇಂದ್ರದಿಂದ ಇದುವರೆಗೂ ಯಾವುದೇ ರೀತಿಯ ಸಕಾರಾತ್ಮಕ ಉತ್ತರ ಬಂದಿರುವುದಿಲ್ಲ. ಈ ಲೋಪಗಳನ್ನು ಪರಿಹರಿಸಬೇಕು ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತೆರಿಗೆ, ದರಗಳು ಮತ್ತು ಶುಲ್ಕಗಳು) ನಿಯಮಗಳು, 2025 ಅಡಿಯಲ್ಲಿ, 97 ಲಕ್ಷಕ್ಕೂ ಹೆಚ್ಚು ಕೃಷಿಯೇತರ ಆಸ್ತಿಗಳಿಗೆ ಇ-ಖಾತಾ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂಬ ಉದ್ದೇಶಕ್ಕೆ,  ಇ-ಸ್ವತ್ತು 2.0 ನಲ್ಲಿ ಇರುವ ಲೋಪಗಳನ್ನು ಸರಿಪಡಿಸಲು ಇಲಾಖೆಗೆ ಸಮಯದ ಅಗತ್ಯವಿದೆ.  ಶೀಘ್ರದಲ್ಲಿಯೇ ಬಾಕಿ ಇರುವ ಲೋಪಗಳನ್ನು ಸರಿ ಪಡಿಸಿ, ಗ್ರಾಮೀಣ ಜನರು ಗ್ರಾಮ ಪಂಚಾಯತಿ ಕಚೇರಿಗಳಿಗೆ ತೆರಳದೆ, ಮನೆಯಲ್ಲಿಯೇ ಕುಳಿತು ಆನ್‌ ಲೈನ್ ಮೂಲಕ ಇ-ಖಾತಾ ಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular