ಗಮನಿಸಿ: ಇ- ಕೆವೈಸಿ ಮಾಡಿಸದ ‘ಬಿಪಿಎಲ್ ಕಾರ್ಡ್’ದಾರರಿಗೆ ‘ಪಡಿತರ’ ಸ್ಥಗಿತ

ಬೆಂಗಳೂರು: ಬಿಪಿಎಲ್ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಎಲ್ಲಾ ಸದಸ್ಯರು ಇ -ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಇ -ಕೆವೈಸಿ ಮಾಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಡಿತರ ವಿತರಣೆ ಸ್ಥಗಿತಗೊಳಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಆಗಸ್ಟ್ 31ರೊಒಳಗೆ ಬೆಳಗ್ಗೆ 7ರಿಂದ ರಾತ್ರಿ 9 ಗಂಟೆಯವರೆಗೆ ಉಚಿತವಾಗಿ ಇ -ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಇ -ಕೆವೈಸಿ ಮಾಡಿಸದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಲಾಗುವುದು.

ಈಗಾಗಲೇ ಇ -ಕೆವೈಸಿ ಮಾಡಿಸಿದವರು ಮತ್ತೊಮ್ಮೆ ಇ -ಕೆವೈಸಿ ಮಾಡಿಸುವ ಅಗತ್ಯವಿರುವುದಿಲ್ಲ. ಇ -ಕೆವೈಸಿ ಮಾಡಿಸದ ಬಿಪಿಎಲ್ ಕಾರ್ಡ್ ಕುಟುಂಬದ ಸದಸ್ಯರು ಮಾತ್ರ ಇ -ಕೆವೈಸಿ ಮಾಡಿಸಬೇಕೆಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read