HomeKarnatakaಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಇ- ಲೈಬ್ರರಿ ಯೋಜನೆಗೆ ಚಾಲನೆ; ಎಲ್ಲಾ ಸರ್ಕಾರಿ ಶಾಲೆಗಳಲ್ಲೂ...

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಇ- ಲೈಬ್ರರಿ ಯೋಜನೆಗೆ ಚಾಲನೆ; ಎಲ್ಲಾ ಸರ್ಕಾರಿ ಶಾಲೆಗಳಲ್ಲೂ LKG, UKG

ಶಿವಮೊಗ್ಗ: ಸೆಪ್ಟೆಂಬರ್ 5 ರಿಂದ ಶಾಲೆಗಳಲ್ಲಿ ಇ- ಲೈಬ್ರೆರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರ ತಂದು ಅವರಲ್ಲಿ ಓದುವ ಹವ್ಯಾಸ ಬೆಳೆಸಲು ಯೋಜಿಸಲಾಗಿದೆ. ಹೀಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗ್ರಂಥಾಲಯ ಅಭಿವೃದ್ಧಿ ಪಡಿಸುತ್ತಿದ್ದು, ಇದರೊಂದಿಗೆ ಇ-ಲೈಬ್ರೆರಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ -ಲೈಬ್ರೆರಿಯಲ್ಲಿ 40 ಲಕ್ಷಕ್ಕೂ ಅಧಿಕ ಪ್ರಕಾರದ ಪುಸ್ತಕಗಳು ದೊರೆಯುತ್ತವೆ. ಇದರ ಸದಸ್ಯತ್ವ ಉಚಿತವಾಗಿರುತ್ತದೆ. ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಂದು ಇ- ಲೈಬ್ರೆರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ನಗರ ಪ್ರದೇಶದ ಮಕ್ಕಳಿಗೆ ದೊರೆಯುತ್ತಿರುವ ಶೈಕ್ಷಣಿಕ ಸೌಲಭ್ಯ ಗ್ರಾಮೀಣ ಭಾಗದ ಮಕ್ಕಳಿಗೂ ಸಿಗುವಂತಾಗಬೇಕು. ಹೀಗಾಗಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular