HomeIndiaBIG NEWS: ಜೂ. 16ರಿಂದ ಒಟಿಪಿ ಮೂಲಕ ಎಲ್ಲಾ RTI ಅರ್ಜಿಗಳ ಇ-ಮೇಲ್ ಪರಿಶೀಲನೆ ಪ್ರಕ್ರಿಯೆ...

BIG NEWS: ಜೂ. 16ರಿಂದ ಒಟಿಪಿ ಮೂಲಕ ಎಲ್ಲಾ RTI ಅರ್ಜಿಗಳ ಇ-ಮೇಲ್ ಪರಿಶೀಲನೆ ಪ್ರಕ್ರಿಯೆ ಜಾರಿ

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯಡಿ(ಆರ್‌ಟಿಐ) ಸಲ್ಲಿಸಲಾಗುವ ಎಲ್ಲಾ ಅರ್ಜಿಗಳನ್ನು ಒಟಿಪಿ ಮೂಲಕ ಇ-ಮೇಲ್ ಪರಿಶೀಲನೆ ನಡೆಸುವ ಪ್ರಕ್ರಿಯೆಯನ್ನು ಜೂನ್ 16 ರಿಂದ ಕೇಂದ್ರ ಸರ್ಕಾರ ಜಾರಿಗೆ ತರಲಿದೆ.

ಪೋರ್ಟಲ್ ನ ಸೈಬರ್ ಭದ್ರತಾ ಚೌಕಟ್ಟನ್ನು ಬಲಪಡಿಸುವ ಜೊತೆಗೆ ನಾಗರೀಕರ ಗೌಪ್ಯತೆ ಕಾಪಾಡುವುದು ಇದರ ಉದ್ದೇಶವಾಗಿದೆ ಎಂದು ಸೋಮವಾರ ಬಿಡುಗಡೆ ಮಾಡಲಾದ ಹೇಳಿಕೆಯಲ್ಲಿ ತಿಳಿಸಲಾಗಿದೆ.

www.rtionline.gov.in ವೆಬ್ಸೈಟ್ ಮೂಲಕ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಇದು ಬಳಕೆದಾರರಿಗೆ ಮೇಲ್ಮನವಿ ಸಲ್ಲಿಸಲು ಅನುವು ಮಾಡಿಕೊಡಲಿದೆ. ಆರ್‌ಟಿಐ ಅಡಿ ಸಲ್ಲಿಸಲಾಗುವ ಎಲ್ಲಾ ಅರ್ಜಿಗಳನ್ನು ಒಟಿಪಿ ಮೂಲಕ ಇ-ಮೇಲ್ ಪರಿಶೀಲನೆ ನಡೆಸುವ ಪ್ರಕ್ರಿಯೆಯನ್ನು ಜೂನ್ 16 ರಿಂದ ಕೇಂದ್ರ ಸರ್ಕಾರ ಜಾರಿಗೆ ತರಲಿದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ನಾಗರಿಕ ಗೌಪ್ಯತೆ ಮತ್ತು ಡೇಟಾ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪೋರ್ಟಲ್‌ನ ಸೈಬರ್ ಭದ್ರತಾ ಚೌಕಟ್ಟನ್ನು ಬಲಪಡಿಸಲು, ಸೋಮವಾರ, ಜೂನ್ 16, 2025 ರಿಂದ ಪ್ರಾರಂಭವಾಗುವ ಎಲ್ಲಾ ಆರ್‌ಟಿಐ ವಿನಂತಿಗಳಿಗೆ ಒಟಿಪಿ ಮೂಲಕ ಇಮೇಲ್ ಪರಿಶೀಲನೆಯನ್ನು ಕಾರ್ಯಗತಗೊಳಿಸಲಾಗುತ್ತದೆ” ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (ಡಿಒಪಿಟಿ) ಆಡಳಿತ ನಿಯಂತ್ರಣದಲ್ಲಿರುವ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular