HomeLatest Newsಬೆಂಗಳೂರಲ್ಲಿ ಗಣರಾಜ್ಯೋತ್ಸವದ ಪರೇಡ್ ವೀಕ್ಷಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆ, ಜಸ್ಟ್ ಹೀಗೆ ಪಡೆಯಿರಿ

ಬೆಂಗಳೂರಲ್ಲಿ ಗಣರಾಜ್ಯೋತ್ಸವದ ಪರೇಡ್ ವೀಕ್ಷಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆ, ಜಸ್ಟ್ ಹೀಗೆ ಪಡೆಯಿರಿ

ಬೆಂಗಳೂರು :   : ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರು ತಿಳಿಸಿದ್ದಾರೆ.

ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in ) ನಲ್ಲಿ ಜನವರಿ 14 2026 ರಿಂದ ಜನವರಿ 24, 2026 ರ ಸಂಜೆ 5.00 ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು.

ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ: 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್ ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular