HomeKarnatakaBig Update: ಇ-ಸ್ವತ್ತು ತಂತ್ರಾಂಶ ಮತ್ತೊಂದು ಅಪ್‌ಡೇಟ್

Big Update: ಇ-ಸ್ವತ್ತು ತಂತ್ರಾಂಶ ಮತ್ತೊಂದು ಅಪ್‌ಡೇಟ್

“ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ. ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

“ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದನೆ ಮಾಡುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಈ ಹಿನ್ನೆಲೆಯಲ್ಲಿ ಇ-ಸ್ವತ್ತು ತಂತ್ರಾಂಶವನ್ನು ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಎನ್‌ಐಸಿ ಸಂಸ್ಥೆ ಮೂಲಕ ಉದ್ಭವಿಸಿರುವ  ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಮತ್ತು ಉಳಿದ ಮಾಡ್ಯುಲ್‌ಗಳನ್ನು ಆದ್ಯತೆ ಮೇರೆಗೆ ಅಭಿವೃದ್ದಿಪಡಿಸಲು ಕಳೆದ ಜನವರಿಯಲ್ಲಿ ಕೇಂದ್ರದ ಮಾಹಿತಿ ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್‌ ಖಾತೆಯ ಸಚಿವರಿಗೆ ತಾವು ಬರೆದಿದ್ದ ಪತ್ರಕ್ಕೆ ಸಂಬಂಧಿಸಿದಂತೆ ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಕೆಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ” ಎಂದು ಹೇಳಿದರು.

ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದ್ದು,  ಈವರೆಗೆ 478 ಹೊಸ ಬಡಾವಣೆಗಳಿಗೆ ಅರ್ಜಿ ಸಲ್ಲಿಕೆಯಾಗಿದ್ದು, ಅವುಗಳಲ್ಲಿ 54  ಹೊಸ ಬಡಾವಣೆಗಳಿಗೆ ಗ್ರಾಮ ಪಂಚಾಯತಿ ಹಂತದಲ್ಲಿ ಅನುಮೋದನೆ ನೀಡಲಾಗಿದೆ. ಹಾಗೂ ಹೊಸ ಬಹುಮಹಡಿ (ಅಪಾರ್ಟ್‌ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ 10 ದಿನದೊಳಗೆ ಕ್ರಮವಹಿಸಲಾಗುವುದು.

ಇ-ಸ್ವತ್ತು ತಂತ್ರಾಂಶದ ಬಳಕೆದಾರರು ಎದುರಿಸುತ್ತಿರುವ ಲಾಗಿನ್‌ನಲ್ಲಿ  ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುತ್ತದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ, ಮತ್ತಷ್ಟು ಸರಳಿಕರಿಸಲು   ಕ್ರಮವಹಿಸಲಾಗುತ್ತಿದೆ.

ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಿಲ್ಲವಾದ್ದರಿಂದ ಸಾರ್ವಜನಿಕರು ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡದೆಯೇ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಬಹುದಾಗಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

ಇ-ಸ್ವತ್ತು ಸಹಾಯವಾಣಿ  9483476000,  ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು https://eswathu.kar³nataka.gov.in/Login.aspx ರಲ್ಲಿ ‘ಸಂಪರ್ಕಿಸಿ’  ಶೀರ್ಷಿಕೆಯಡಿ ಹಾಗೂ https://panchatantra.karnataka.gov.in ರಲ್ಲಿ ಪ್ರಕಟಿಸಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular