ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಶೀಘ್ರವೇ 90 ಲಕ್ಷ ಆಸ್ತಿಗಳಿಗೆ ಇ- ಸ್ವತ್ತು ವಿತರಣೆ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿರುವ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆ ಇ-ಸ್ವತ್ತು ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.

ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆಸ್ತಿ ತೆರಿಗೆ ಸಂಗ್ರಹ ಅಭಿಯಾನ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.

ಇನ್ನು ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಿಸಲು ಅವಕಾಶ ನೀಡಬಾರದು. ಹೊಸ ಬಡಾವಣೆಗಳ ನಿರ್ಮಾಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಖಾತೆ ಇಲ್ಲದ ಅನೇಕ ಆಸ್ತಿಗಳ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ನಿವೇಶನ, ಮನೆ ನೋಂದಣಿ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 90 ಲಕ್ಷ ಆಸ್ತಿಗಳಿಗೆ ಇ- ಸ್ವತ್ತು ವಿತರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಅಭಿಯಾನ ರೂಪದಲ್ಲಿ ನಿಯಮ ಬದ್ಧ ಆಸ್ತಿಗಳಿಗೆ ಇ- ಸ್ವತ್ತು ವಿತರಿಸುವ ಮೂಲಕ ತೆರಿಗೆ ಸಂಗ್ರಹಿಸಬೇಕು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read