BREAKING NEWS: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಕರಡಿ ದಾಳಿ: ಹೆಚ್ಚಿದ ಆತಂಕ

ಶಿವಮೊಗ್ಗ: ನಗರದ ಗೋಪಾಳ ಬಡಾವಣೆ ರಾಮಕೃಷ್ಣ ಶಾಲೆ, ಚಂದನವನ ಪಾರ್ಕ್ ಸೇರಿ ಸುತ್ತಲಿನ ಪ್ರದೇಶದಲ್ಲಿ ಕರಡಿ ಓಡಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟವರು ಕರಡಿ ಕಂಡು ಆತಂಕಗೊಂಡಿದ್ದಾರೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಹೊಟ್ಟೆಗೆ ಪರಚಿದೆ. ಭಯದಿಂದ ಜನ ಕಿರುಚಾಡಿದಾಗ ಪೊದೆಯಲ್ಲಿ ಮರೆಯಾಗಿದೆ. ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕರಡಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಬೆಳ್ಳಂಬೆಳಗ್ಗೆ ಕರಡಿ ದಾಳಿಯಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಮನೆಯಿಂದ ಹೊರಗೆ ಬರದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಆದರೂ ಕರಡಿ ಕಾಣಿಸಿಕೊಂಡ ಸುದ್ದಿ ತಿಳಿದ ಭಾರಿ ಸಂಖ್ಯೆಯ ಜನ ಸೇರಿಕೊಂಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read