HomeLatest NewsBREAKING: ಬೆಳ್ಳಂಬೆಳಗ್ಗೆ ಕಲಬುರಗಿಯಲ್ಲಿ ಮೊಳಗಿದ ಗುಂಡಿನ ಸದ್ದು: ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್ | FIRING

BREAKING: ಬೆಳ್ಳಂಬೆಳಗ್ಗೆ ಕಲಬುರಗಿಯಲ್ಲಿ ಮೊಳಗಿದ ಗುಂಡಿನ ಸದ್ದು: ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್ | FIRING

ಕಲಬುರಗಿ: ಬೆಳ್ಳಂಬೆಳಗ್ಗೆ ಕಲಬುರಗಿಯಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರು ಅಂತಾರಾಜ್ಯ ದರೋಡೆಕೋರರ ಮೇಲೆ ಫೈರಿಂಗ್ ಮಾಡಲಾಗಿದೆ.

ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 18 ಲಕ್ಷ ರೂಪಾಯಿ ದೋಚಿದ್ದವರ ಮೇಲೆ ಫೈರಿಂಗ್ ಮಾಡಲಾಗಿದೆ. ಹರಿಯಾಣ ಮೂಲದ ತಸ್ಲಿಂ ಮತ್ತು ಶರೀಫ್ ಅವರ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಆರೋಪಿಗಳನ್ನು ಬಂಧಿಸಲು ಕಲಬುರಗಿ ಗ್ರಾಮೀಣ ಠಾಣೆ ಪೊಲೀಸರು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಇಬ್ಬರ ಮೇಲೆ ಇನ್ಸ್ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಇಬ್ಬರ ಮೊಣಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಪಿಎಸ್ಐ ಬಸವರಾಜ್ ಹಾಗೂ ಇಬ್ಬರು ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular