HomeLive NewsBREAKING NEWS: ಬೆಳ್ಳಂಬೆಳಗ್ಗೆ ಸರ್ವೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

BREAKING NEWS: ಬೆಳ್ಳಂಬೆಳಗ್ಗೆ ಸರ್ವೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಕೋಲಾರ: ಕೋಲಾರದಲ್ಲಿ ಸರ್ವೆ ಇಲಾಖೆ ಅಧಿಕಾರಿ ಸುರೇಶ್ ಬಾಬುಗೆ ಸೇರಿದ ಒಟ್ಟು ಆರು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಕೋಲಾರ ನಗರದ ಮನೆ, ಮಾಲೂರು, ಪಟ್ಟಣದ ಮನೆ, ನಿಡಘಟ್ಟ ಗ್ರಾಮದ ಮನೆ, ಕಚೇರಿಗಳು ಸೇರಿ ಒಟ್ಟು ಆರು ಕಡೆ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಅಕ್ರಮವಾಗಿ ಸರ್ಕಾರಿ ದಾಖಲೆ ತಿದ್ದಿ ಸರ್ಕಾರಿ ಭೂಮಿ ಕಬಳಿಕೆ, ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಸುರೇಶ್ ಬಾಬು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ. ಮೂರು ತಿಂಗಳ ಹಿಂದೆಯೇ ಸುರೇಶ್ ಬಾಬು ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದರು. ಇದೀಗ ಮತ್ತೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular