BIG NEWS : ಕಲಬುರಗಿ ಜಿಲ್ಲೆಯಲ್ಲಿ ಭೂಕಂಪನ : ಆತಂಕಕ್ಕೆ ಒಳಗಾಗದಂತೆ ಸಚಿವ ‘ಪ್ರಿಯಾಂಕ್ ಖರ್ಗೆ’ ಮನವಿ.!

ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8:17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿರುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು, ಸಾರ್ವಜನಿಕರು ಹಾಗೂ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ವಿನಂತಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read