HomeInternationalBREAKING : ದಕ್ಷಿಣ ಪೆರುವಿನಲ್ಲಿ7.2 ತೀವ್ರತೆಯ ಪ್ರಬಲ ಭೂಕಂಪ ; ಮನೆಯಿಂದ ಹೊರಗೆ ಓಡಿಬಂದ ಜನ

BREAKING : ದಕ್ಷಿಣ ಪೆರುವಿನಲ್ಲಿ7.2 ತೀವ್ರತೆಯ ಪ್ರಬಲ ಭೂಕಂಪ ; ಮನೆಯಿಂದ ಹೊರಗೆ ಓಡಿಬಂದ ಜನ

ದಕ್ಷಿಣ ಪೆರುವಿನಲ್ಲಿ ಗುರುವಾರ ಮಧ್ಯಾಹ್ನ ಭಾರಿ ಭೂಕಂಪ ಸಂಭವಿಸಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಭೂಮಿ ಏಕಾಏಕಿ ಕಂಪಿಸಿದ ಹಿನ್ನೆಲೆಯಲ್ಲಿ ಭಯಭೀತರಾದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಅಂಡಾಹುಯ್ಲಾಸ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪದ ಪ್ರಬಲ ಅನುಭವವಾಗಿದೆ.

ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪದ ಪರಿಣಾಮ ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಹಾಗೂ ಗೋಡೆಗಳು ಕುಸಿದಿದ್ದು, ಕೆಲವು ಕಟ್ಟಡಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ರಾಜಧಾನಿ ಲಿಮಾದಲ್ಲೂ ಲಘು ಕಂಪನದ ಅನುಭವವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಭಾರಿ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.

ಅಯಾಕುಚೋ ಪ್ರದೇಶದ ಪರಿನಾಕೊಚಾಸ್ ಪ್ರಾಂತ್ಯದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಪೆರು ಜಿಯೋಫಿಸಿಕಲ್ ಇನ್‌ಸ್ಟಿಟ್ಯೂಟ್‌ ತಿಳಿಸಿದೆ. ಭೂಮಿಯ ಸುಮಾರು 108 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರಬಿಂದು ದಾಖಲಾಗಿದೆ. ಕೊರಾಕೊರಾದಲ್ಲಿ ಮೆರ್ಕಲ್ಲಿ ಮಾಪಕದಲ್ಲಿ 3ರಿಂದ 4ರ ತೀವ್ರತೆಯ ಕಂಪನ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಭೂಕಂಪದ ಹಿನ್ನೆಲೆಯಲ್ಲಿ ಸದ್ಯ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಪೆರು ನೌಕಾಪಡೆ ತಿಳಿಸಿದೆ. ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಪೆರು ಭೂಕಂಪ ಪೀಡಿತ ಪ್ರದೇಶವಾಗಿದ್ದು, ಈ ಭಾಗದಲ್ಲಿ ಈ ಹಿಂದೆ ಹಲವು ಬಾರಿ ಪ್ರಬಲ ಭೂಕಂಪಗಳು ಸಂಭವಿಸಿವೆ. ಪೆರು ಪೆಸಿಫಿಕ್ ರಿಂಗ್ ಆಫ್ ಫೈರ್ ಪ್ರದೇಶದ ಭಾಗವಾಗಿರುವುದರಿಂದ ಇಲ್ಲಿ ಭೂಕಂಪಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. 2007ರಲ್ಲಿ ಇಕಾ ಪ್ರದೇಶದಲ್ಲಿ ಸಂಭವಿಸಿದ್ದ ಭೀಕರ ಭೂಕಂಪದಲ್ಲಿ ಸುಮಾರು 600 ಮಂದಿ ಮೃತಪಟ್ಟಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular