ನವದೆಹಲಿ: ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ದಿಬಾಂಗ್ ಕಣಿವೆಯಲ್ಲಿ ಲಘು ಭೂಕಂಪ ಸಂಭವಿಸಿದೆ. ಇಂದು ಬೆಳಿಗ್ಗೆ 5:06:33ಕ್ಕೆ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಭಾನುವಾರ ಬೆಳಿಗ್ಗೆ ಅರುಣಾಚಲ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಮೇ 18 ರಂದು ಬೆಳಿಗ್ಗೆ 5:06 ಕ್ಕೆ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ರಾಜ್ಯದ ದಿಬಾಂಗ್ ಕಣಿವೆ ಜಿಲ್ಲೆಯಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಅನುಭವವಾಗಿದೆ ಎಂದು NCS ತಿಳಿಸಿದೆ.
ದಿಬಾಂಗ್ ಕಣಿವೆಯ ಪಕ್ಕದಲ್ಲಿರುವ ಪ್ರದೇಶದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದ ಒಂದು ದಿನದ ನಂತರ ಇದು ಸಂಭವಿಸಿದೆ. ಹಿಂದಿನ ಭೂಕಂಪವು 12 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಭೂಕಂಪನದ ಕೇಂದ್ರಬಿಂದು 28.78 N ಅಕ್ಷಾಂಶ ಮತ್ತು 95.70 E ರೇಖಾಂಶದಲ್ಲಿದೆ ಎಂದು ಭೂಕಂಪಶಾಸ್ತ್ರ ಕೇಂದ್ರವು ಗಮನಿಸಿದೆ.
An earthquake with a magnitude of 3.8 on the Richter Scale hit Dibang Valley, Arunachal Pradesh at 05:06:33 IST today: National Center for Seismology pic.twitter.com/n7NntxFpKY
— ANI (@ANI) May 18, 2025