HomeLatest NewsEbola Virus: ಮತ್ತೊಂದು ಮಾರಣಾಂತಿಕ ವೈರಸ್ 'ಎಬೋಲಾ' ಭೀತಿ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

Ebola Virus: ಮತ್ತೊಂದು ಮಾರಣಾಂತಿಕ ವೈರಸ್ ‘ಎಬೋಲಾ’ ಭೀತಿ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಕೊರೊನಾ ಮಾಹಾಮರಿ ಬಳಿಕ ಇದೀಗ ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿಕೊಟ್ಟಿದೆ. ಎಬೋಲಾ ಎಂಬ ಹೊಸ ವೈರಸ್ ಹರಡುತ್ತಿದ್ದು, ಈ ಬುಂಡಿಬುಗ್ಯೊ ತಳಿಗೆ ಲಸಿಕೆ ಲಭ್ಯವಿಲ್ಲ, ಸಾವಿನ ಪ್ರಮಾಣವೂ ಅಧಿಕವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಆಫ್ರಿಕಾ ಖಂಡದಲ್ಲಿ ಅತಿ ವೇಗವಾಗಿ ಹರಡುತ್ತಿರುವ ಎಬೋಲಾ ವೈರಸ್ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಭಾರತದಲ್ಲೂ ಸಹ ಮುನ್ನೆಚ್ಚರಿಕೆ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಬೋಲಾ ಬುಂಡಿಬುಗ್ಯೊ ತಳಿಗೆ ಸೇರಿದ ವೈರಸ್ ಆಗಿದ್ದು, ಇದಕ್ಕೆ ಯಾವುದೇ ಅಧಿಕೃತ ಲಸಿಕೆ ಅಥವಾ ನಿರ್ದಿಷ್ಟ ಚಿಕಿತ್ಸೆ ಈವರೆಗೆ ಇಲ್ಲ. ಈ ವೈರಸ್ ಸೋಂಕು ತಗುಲಿದರೆ ಸಾವಿನ ಪ್ರಮಾಣ ಅತ್ಯಂತ ಹೆಚ್ಚಾಗಿದೆ. ಆದರೆ, ಇದು ಕೋವಿಡ್ ಮಹಾಮಾರಿಯಂತೆ ಗಾಳಿಯಲ್ಲಿ ಅತಿ ವೇಗವಾಗಿ ಪೆಂಡಾಮಿಕ್ ಆಗುವ ಸಾಧ್ಯತೆ ತೀರಾ ಕಡಿಮೆ.

ಈ ವೈರಸ್ ಮೂಲತಃ ಫ್ರೂಟ್ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ ನೇರ ಸಂಪರ್ಕ ಅಗತ್ಯವಾಗುತ್ತದೆ.

ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಆತಂಕ ಹೆಚ್ಚಿರುವ ಕಾಂಗೋ, ಉಗಾಂಡ ಮತ್ತು ಇತರೆ ಆಫ್ರಿಕಾ ದೇಶಗಳಿಂದ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಸ್ಕ್ರೀನಿಂಗ್ ನಡೆಸುವ ಜೊತೆಗೆ, ಅಗತ್ಯವಿದ್ದರೆ ಆಫ್ರಿಕಾ ಪ್ರವಾಸಿಗರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡುವುದು ದೇಶದ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಅವಶ್ಯಕವಾಗಿದೆ.

ಎಬೀಲಾ ವೈರಸ್ ಸೋಂಕು ತಗುಲಿದ ನಂತರ ಆರಂಭದಲ್ಲಿ ತೀವ್ರ ಜ್ವರ, ತಲೆನೋವು, ಮೈಕೈನೋವು, ವಾಂತಿ ಮತ್ತು ಭೇದಿ ಕಂಡುಬರುತ್ತದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಲಿವರ್ ಮತ್ತು ಶ್ವಾಸಕೋಶದ ವೈಫಲ್ಯ ಸಂಭವಿಸಿ ಸಾವು ಸಂಭವಿಸಬಹುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular