HomeKarnatakaರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಕೋ ಕ್ಲಬ್ ಸ್ಥಾಪನೆ, ತಾಯಿ ಹೆಸರಲ್ಲಿ ಸಸಿ ನೆಡುವ ಅಭಿಯಾನ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಕೋ ಕ್ಲಬ್ ಸ್ಥಾಪನೆ, ತಾಯಿ ಹೆಸರಲ್ಲಿ ಸಸಿ ನೆಡುವ ಅಭಿಯಾನ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ನಿರ್ಮಿಸುವ ಉದ್ದೇಶದಿಂದ ಇಕೋ ಕ್ಲಬ್ ಸ್ಥಾಪಿಸಬೇಕು ಮತ್ತು ತಾಯಿ ಹೆಸರಲ್ಲಿ ಒಂದು ಮರ ಅಭಿಯಾನ ನಡೆಸಬೇಕು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಸೂಚನೆ ನೀಡಿದೆ.

ಕಾರ್ಯಕ್ರಮದ ಸುಗಮ ನಿರ್ವಹಣೆಗಾಗಿ ಶಾಲೆ ಕ್ಲಸ್ಟರ್ ಬ್ಲಾಕ್ ಮತ್ತು ಜಿಲ್ಲಾಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜುಲೈ 31ರೊಳಗೆ ಸಸಿ ನೆಡುವ ಗುರಿ ಪೂರ್ಣಗೊಳಿಸಿ ಇಕೋ ಕ್ಲಬ್ ಚಟುವಟಿಕೆಗಳ ಮಾಹಿತಿ ಮತ್ತು ಜಿಯೋ ಟ್ಯಾಗ್ ಫೋಟೋಗಳನ್ನು ನಿರ್ದಿಷ್ಟ ಪೋರ್ಟಲ್ ನಲ್ಲಿ(https://ecoclubs.education.gov.in) ಶೇಕಡ 100ರಷ್ಟು ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ. ನಿರ್ಲಕ್ಷ್ಯ ವಹಿಸಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಚಿತ್ರಕೃಪೆ: ಎಐ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular