HomeKarnatakaBIG NEWS: ಮುಡಾ ಪ್ರಕರಣಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ED ಗೆ ದೂರು ನೀಡಿದ...

BIG NEWS: ಮುಡಾ ಪ್ರಕರಣಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ED ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯನವರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೂ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

ಇ-ಮೇಲ್ ಮತ್ತು ಪತ್ರ ಬರೆದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಜಾರಿ ನಿರ್ದೇಶನಾಲಯದ ಬೆಂಗಳೂರು ನಿರ್ದೇಶಕರಿಗೆ ದೂರು ನೀಡಲಾಗಿದೆ. ಮನಿ ಲ್ಯಾಂಡರಿಂಗ್ ಆಕ್ಟ್ ಮೂಲಕ ತನಿಖೆ ನಡೆಸುವಂತೆ ಒತ್ತಾಯಿಸಿ ಸಿಎಂ ವಿರುದ್ಧ ದೂರು ನೀಡಲಾಗಿದೆ.

ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಮುಡಾದಲ್ಲಿ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನ ಪಡೆದುಕೊಂಡಿದ್ದಾರೆ. ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಇಡಿಗೆ 16 ಪುಟಗಳ ಪತ್ರವನ್ನು ಸ್ನೇಹಮಯಿ ಕೃಷ್ಣ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular