ಪರಪ್ಪನ ಅಗ್ರಹಾರ ಜೈಲು ಸೇರಿದ ಮಾಜಿ ಸಚಿವ ನಾಗೇಂದ್ರ ಈಗ ಕೈದಿ ನಂ. 7140

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನ ನ್ಯಾಯಾಂಗ ವಶಕ್ಕೆ ನೀಡಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ನಾಗೇಂದ್ರ ಅವರನ್ನು ಕಳುಹಿಸಲಾಗಿದೆ. ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 7140 ನೀಡಲಾಗಿದೆ. ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ಇರಲು ನಾಗೇಂದ್ರ ಅವರಿಗೆ ವ್ಯವಸ್ಥೆ ಮಾಡಲಾಗಿದೆ.

ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇಡಿ ಅಧಿಕಾರಿಗಳು ಮತ್ತೆ ತಮ್ಮ ವಶಕ್ಕೆ ಕೇಳದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read