HomeKarnatakaBREAKING: 'ವಾಲ್ಮೀಕಿ' ನಿಗಮ ಹಗರಣಕ್ಕೆ ಸ್ಪೋಟಕ ತಿರುವು: ಸಿಎಂ, ಸಚಿವರ ಹೆಸರು ಹೇಳಲು ಒತ್ತಡ: ಇಡಿ...

BREAKING: ‘ವಾಲ್ಮೀಕಿ’ ನಿಗಮ ಹಗರಣಕ್ಕೆ ಸ್ಪೋಟಕ ತಿರುವು: ಸಿಎಂ, ಸಚಿವರ ಹೆಸರು ಹೇಳಲು ಒತ್ತಡ: ಇಡಿ ಅಧಿಕಾರಿಗಳ ವಿರುದ್ಧವೇ FIR

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಶೇಷಾದ್ರಿಪುರಂ ಠಾಣೆಗೆ ವಾಲ್ಮೀಕಿ ನಿಗಮ ಅಭಿವೃದ್ಧಿ ನಿಗಮದ ಹಿಂದಿನ ಜಂಟಿ ನಿರ್ದೇಶಕ ಕಲ್ಲೇಶ್ ದೂರು ನೀಡಿದ್ದು, ಅಲ್ಲಿ ದಾಖಲಾಗಿದ್ದ ಎನ್.ಸಿ.ಆರ್. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ವರ್ಗಾವಣೆಯಾದ ಬಳಿಕ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಯಾವುದೇ ತಪ್ಪು ಮಾಡದಿದ್ದರೂ ವಿಚಾರಣೆ ಮಾಡಿದ ಆರೋಪದಡಿ ಕಲ್ಲೇಶ್ ದೂರು ನೀಡಿದ್ದಾರೆ. ಕಾನೂನು ಬಾಹಿರವಾಗಿ ಇಡಿ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಬೈದು ನನ್ನ ಮೇಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಲ್ಲೇಶ್ ಆರೋಪಿಸಿದ್ದಾರೆ. ಇಡಿ ಅಧಿಕಾರಿಗಳಾದ ಮಿತ್ತಲ್ ಮತ್ತು ಕಣ್ಣನ್ ಅವರ ವಿರುದ್ಧ ಕಲ್ಲೇಶ್ ದೂರು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular