HomeKarnatakaBIG NEWS: ಇಡಿ ಅಧಿಕಾರಿಗಳ ವಿರುದ್ಧ ಪೊಲೀಸರಿಂದ FIR ದಾಖಲು; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

BIG NEWS: ಇಡಿ ಅಧಿಕಾರಿಗಳ ವಿರುದ್ಧ ಪೊಲೀಸರಿಂದ FIR ದಾಖಲು; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಬೆಂಗಳೂರು: ಜಾರಿ ನಿರ್ದೇಶನಾಯಲಯ ಅಧಿಕಾರಿಗಳ ವಿರುದ್ಧವೇ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು, ಪ್ರಕರಣ ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿರುವ ಘಟನೆ ನಡೆದಿದೆ.

ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಲಾಠಿಯಿಂದ ಹೊಡೆದಿದ್ದಾರೆ ಎಂದು ಆರೋಪಿಸಿ ಕೊಮುಲ್ ನಿರ್ದೇಶಕ ವೈ.ಬಿ.ಸತ್ಯನಾರಾಯಣರಿಂದ ದೂರು ದಾಖಲಾಗಿತ್ತು. ವಿಲ್ಸನ್ ಗಾರ್ಡನ್ ಪೊಲೀಸರು ಇಡಿ ಅಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾರಿ ನಿರ್ದೇಶನಾಲಯದ ಉಪ ನಿರ್ದೇಶ ಮನೋಜ್ ಮಿಟ್ಟಲ್, ಇಡಿ ಸಹಾಯಕ ನಿರ್ದೇಶಕ ಅಜಯ್ ಕುಮಾರ್ ವ್ಯದ್ಯರಿಂದ ಇಡಿ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇಡಿ ಅಧಿಕಾರಿಗಳು ಪ್ಲಾಸ್ಟಿಕ್ ಪೈಪ್ ನಿಂದ ಹೊಡೆದಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ವಾದ ಮಂಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೂರು ದಾರ ವೈ.ಬಿ.ಅಶ್ವತ್ಥನಾರಾಯಣಗೆ ಹೈಕೋರ್ಟ್ ನೋಟಿಸ್ ನೀಡಿದೆ. ಅಲ್ಲದೇ ವಿಲ್ಸನ್ ಗಾರ್ಡನ್ ಪೊಲೀಸರ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular