ರಾಯಪುರ: ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮಗ ಚೈತನ್ಯ ಬಘೇಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭಿಲಾಯಿ ಪಟ್ಟಣದ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಸ ಸಾಕ್ಷ್ಯಗಳನ್ನು ಕಲೆ ಹಾಕಿರುವ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.
ಚೈತನ್ಯ ಬಘೇಲ್ ಗೆ ಸಂಅಬ್ಂಧಿಸಿದ ಹಲವು ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.