HomeKarnataka‘ಲೋಕಾ’ ದಾಳಿ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೊಂದು ಶಾಕ್

‘ಲೋಕಾ’ ದಾಳಿ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೊಂದು ಶಾಕ್

ಬೆಂಗಳೂರು: ಲೋಕಾಯುಕ್ತ ದಾಳಿ ಬೆನ್ನಲ್ಲೇ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಐಟಿ ಮತ್ತು ಇಡಿ ತನಿಖೆಯ ಉರುಳು ಸುತ್ತಿಕೊಂಡಿದೆ. ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಕಚೇರಿ ಮತ್ತು ನಿವಾಸದಲ್ಲಿ 8 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿದೆ. ದಾಳಿ ಬೆನ್ನಲ್ಲೇ KSDL ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದು, ಎ1 ಆರೋಪಿಯಾಗಿರುವ ಅವರಿಗಾಗಿ ಲೋಕಾಯುಕ್ತ ಪೊಲೀಸರು ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

8 ಕೋಟಿ ರೂ.ಗೂ ಅಧಿಕ ಅನಧಿಕೃತ ಹಣ ಪತ್ತೆಯಾಗಿದ್ದು, ಇಡಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರಂಭಿಸಲಿದೆ. ಈಗಾಗಲೇ ಜಾರಿ ನಿರ್ದೇಶನಾಲಯಕ್ಕೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular