HomeKarnatakaಇಡಿ ದಾಳಿ ವೇಳೆ ಬರೋಬ್ಬರಿ 2 ಕೋಟಿ ರೂ. ಹಣ ಪತ್ತೆ: ದಾಳಿ ವೇಳೆ ಸಿಕ್ಕ...

ಇಡಿ ದಾಳಿ ವೇಳೆ ಬರೋಬ್ಬರಿ 2 ಕೋಟಿ ರೂ. ಹಣ ಪತ್ತೆ: ದಾಳಿ ವೇಳೆ ಸಿಕ್ಕ ಹಣದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಅಕ್ರಮ ಹಣ ವರ್ಗಾವಣೆ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಕುಟುಂಬದವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನಡೆಸಿದ ದಾಳಿ ಮುಕ್ತಾಯವಾಗಿದ್ದು, ಬರೋಬ್ಬರಿ 36 ಗಂಟೆಗಳ ಕಾಲ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ದಾಳಿ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗೋಕಾಕ್‌ದ ಹಿಲ್ಸ್‌ ಗಾರ್ಡನ್‌ನಲ್ಲಿರುವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ಪತ್ತೆಯಾದ ಹಣವನ್ನು ಸೀಜ್‌ ಮಾಡಿ ಟ್ರಂಕ್‌ನಲ್ಲಿ ಬ್ಯಾಂಕ್‌ಗೆ ರವಾನಿಸಲಾಗಿದೆ ಎನ್ನಲಾಗಿದೆ. ಸತೀಶ್‌ ಜಾರಕಿಹೊಳಿ ಹಾಗೂ ಕುಟುಂಬದವರ ಮನೆಗಳಲ್ಲಿ ದಾಳಿ ವೇಳೆ ಇಡಿ ಅಧಿಕಾರಿಗಳು ಸುಮಾರು 2 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಡಿ ದಾಳಿ ಬಳಿಕ ಪ್ರತಿಕ್ರಿಯೆ ನಿಡಿದ ಸಚಿವ ಸತೀಶ್ ಜಾರಕಿಹೊಳಿ, ಇಡಿ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿರುವುದು ನಮ್ಮದೇ ನಗದು ಹಣ. ದಾಳಿಯಲ್ಲಿ ಸಿಕ್ಕ 2 ಕೋಟಿ ಹಣ ನಮ್ಮದು. ಇದಕ್ಕೆ ಸೂಕ್ತ ದಾಖಲೆ ನೀಡುತ್ತೇವೆ. ಅದನ್ನು ವಾಪಸ್ ಪಡೆಯಲು ಕಾನೂನು ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಇದು ಇಡಿ ದಾಳಿಯಲ್ಲ, ಇದೊಂದು ತಪಾಸಣೆ. ಏನಾದರೂ ಅನುಮಾನಗಳಿದ್ದರೆ ನೋಟಿಸ್ ನೀಡಿ ಮಾಹಿತಿ ಕೇಳಬಹುದಿತ್ತು. ಅಧಿಕಾರಿಗಳು ಕೇಳಿದ ಮಾಹಿತಿಗೆ ನಾವು ಉತ್ತರ ನೀಡಿದ್ದೇವೆ. ಅಧಿಕಾರಿಗಳ ವಿಚಾರಣೆ ಹಾಗೂ ತನಿಖೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ ಎಂದರು.

ವಿದೇಶದಲ್ಲಿ ಹೂಡಿಕೆ ಮಾಡುತ್ತಿರುವ ವಿಚಾರದ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನೋಟಿಸ್‌ನಲ್ಲಿ ಫೆಮಾ ಕಾಯ್ದೆ ಉಲ್ಲೇಖಿಸಲಾಗಿದೆ. ಆದರೆ ಹೂಡಿಕೆ ವಿಚಾರ ಇನ್ನೂ ಕಾನೂನು ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದರು.

ಇಡಿ. ಅಧಿಕಾರಿಗಳು ಪ್ರತ್ಯೇಕ ತಂಡಗಳಲ್ಲಿ ಬೆಂಗಳೂರಿನ ಡಾಲರ್ಸ್‌ ಕಾಲೋನಿಯ ಸಚಿವ ಸತೀಶ್ ಜಾರಕಿಹೊಳಿ ನಿವಾಸ, ಕ್ರೆಸೆಂಟ್‌ ರಸ್ತೆಯ ಮನೆ, ಆಪ್ತರ ಮನೆಗಳು, ಚಿಕ್ಕೋಡಿಯಲ್ಲಿರುವ ಸಂಸದೆ ಪ್ರಿಯಾಂಕ ಜಾರಕಿಹೊಳಿ ಮನೆ, ಪುತ್ರ ರಾಹುಲ್‌ ಮನೆ, ಗೋಕಾಕ್ ನಲ್ಲಿರುವ ಮನೆ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಸತತ 36 ಗಂಟೆಗಳ ಕಾಲ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular