HomeLive Newsಬಿಜೆಪಿಯವರ ಮೇಲೆ ಇಡಿ ದಾಳಿಯಾಗಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ಬಿಜೆಪಿಯವರ ಮೇಲೆ ಇಡಿ ದಾಳಿಯಾಗಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ: ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.

ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ. ಕಾಂಗ್ರೆಸ್ ನಾಯಕರ ಮೇಲೆ, ವಿಪಕ್ಷದವರ ಮೇಲೆ ಮಾತ್ರ ಇಡಿ ದಾಳಿ ನಡೆಸಲಾಗುತ್ತಿದೆ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular