ಬೆಂಗಳೂರು: ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಂಗಳೂರಿನ ಹಲವೆಡೆಗಳಲ್ಲಿ ದಾಳಿ ನಡೆಸಿದ್ದು, ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಇದೇ ವೇಳೆ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಮಹಮ್ಮದ್ ಹಕೀಬ್ ಖಾನ್ ಅವರ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆದಿದೆ. ಬಿಟ್ ಕಾಯಿನ್ ಹಗರಣದಲ್ಲಿ ಹಕಿಮ್ ಖಾನ್ ಅವರಿಗೂ ನಂಟಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರಿನ ಜಯನಗರದಲ್ಲಿರುವ ಕೆ.ರೆಹಮಾನ್ ಖಾನ್ ನಿವಾಸಕ್ಕೆ 2 ಇನೋವಾ ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳ ತಂಡ, ಕಳೆದ ಆರು ಗಂಟೆಗಳಿಂದ ಪರಿಶೀಲನೆ ನಡೆಸಿವೆ.ಕೆ.ರೆಹಮಾನ್ ಖಾನ್ ಮೊಮ್ಮಗ ಮೊಹಮ್ಮದ್ ಹಕೀಬ್ ನನ್ನು ಸಹ ವಿಚಾರಣೆ ನಡೆಸಿದ್ದಾರೆ.

