HomeLatest NewsBREAKING : ಕಾಂಗ್ರೆಸ್ ಶಾಸಕ ಹ್ಯಾರಿಸ್ ನಿವಾಸದಲ್ಲಿ E.D ಶೋಧ ; 37 ಲಕ್ಷ ಹಣ...

BREAKING : ಕಾಂಗ್ರೆಸ್ ಶಾಸಕ ಹ್ಯಾರಿಸ್ ನಿವಾಸದಲ್ಲಿ E.D ಶೋಧ ; 37 ಲಕ್ಷ ಹಣ ಪತ್ತೆ.!

ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರರಾದ ಮೊಹಮ್ಮದ್ ನಲಪಾಡ್ ಹಾಗೂ ಉಮರ್ ಫಾರೂಕ್ ನಲಪಾಡ್ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ಬೆಂಗಳೂರಿನ ಶಾಂತಿನಗರ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಹಾಗೂ ಅವರ ಪುತ್ರರ ನಿವಾಸಗಳು ಸೇರಿದಂತೆ ಕರ್ನಾಟಕದ ಒಟ್ಟು 12 ರಿಂದ 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಸೋಮವಾರ (ಏಪ್ರಿಲ್ 20, 2026) ಮುಂಜಾನೆಯಿಂದಲೇ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ಇಂದು ಶೋಧ  ಕಾರ್ಯ ನಡೆಸುವಾಗ ಸುಮಾರು 37 ಲಕ್ಷ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿ ವೇಳೆ ಬ್ಯಾಂಕ್ ದಾಖಲೆ ಸೇರಿ ಹಲವು ಮಹತ್ವದ ದಾಖಲೆಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಬಿಟ್‌ಕಾಯಿನ್ ಹಗರಣದ ಕೊಂಡಿ: ಈ ದಾಳಿಯು ಕುಖ್ಯಾತ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಭಾಗಿಯಾಗಿರುವ ಬಿಟ್‌ಕಾಯಿನ್ ಹಗರಣ ಮತ್ತು ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿದೆ ಎಂದು ತಿಳಿದುಬಂದಿದೆ. ಶಾಸಕ ಹ್ಯಾರಿಸ್ ಪುತ್ರರಾದ ಮೊಹಮ್ಮದ್ ನಲಪಾಡ್ ಮತ್ತು ಉಮರ್ ಫಾರೂಕ್ ಅವರು ಶ್ರೀಕಿಯ ಆಪ್ತ ಸಹಚರರಾಗಿದ್ದು, ಅಪರಾಧದಿಂದ ಬಂದ ಹಣದ (Proceeds of Crime) ಮುಖ್ಯ ಫಲಾನುಭವಿಗಳಾಗಿದ್ದಾರೆ ಎಂದು ಇಡಿ ಅಧಿಕಾರಿಗಳು ಶಂಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿ ನಡೆದ ಸ್ಥಳಗಳು: ಬೆಂಗಳೂರಿನ ಅಶೋಕ್ ನಗರ ಮತ್ತು ಮಗ್ರಾತ್ ರಸ್ತೆಯಲ್ಲಿರುವ ಹ್ಯಾರಿಸ್ ನಿವಾಸ, ಅವರ ಕಚೇರಿಗಳು ಹಾಗೂ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಅಕೀಬ್ ಖಾನ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆಯೂ ದಾಳಿ ನಡೆದಿದೆ.ಸಿಆರ್‌ಪಿಎಫ್ (CRPF) ಸಿಬ್ಬಂದಿಯ ಭದ್ರತೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ಹಲವು ಪ್ರಮುಖ ದಾಖಲೆಗಳು ಮತ್ತು ಡಿಜಿಟಲ್ ಪುರಾವೆಗಳನ್ನು

ಈ ದಾಳಿಯನ್ನು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ದಾಳಿಗೆ ನಿಖರ ಕಾರಣವೇನು ಎಂದು ಪ್ರಶ್ನಿಸಿದ್ದರೆ, ಸಚಿವ ಪ್ರಿಯಾಂಕ್ ಖರ್ಗೆ ಅವರು “ಇಡಿ, ಐಟಿ ಸಂಸ್ಥೆಗಳು ಬಿಜೆಪಿಯ ರಾಜಕೀಯ ಕೈಗೊಂಬೆಗಳಾಗಿ ಕೆಲಸ ಮಾಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular