ಬೆಂಗಳೂರು : ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳ ಮೇಲೆ ಇಡಿ (E. D) ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ 5 ಕಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (E.D) ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಹಾಗೂ ಅವರ ಕುಟುಂಬದವರಿಗೆ ಸೇರಿದ ಮನೆ ಮೇಲೆ ದಾಳಿ ನಡೆಸಲಾಗಿದೆ .ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್ ನೀಡಿದೆ.

