HomeIndiaತಮಿಳುನಾಡಿನಲ್ಲಿ ಮತ್ತೊಬ್ಬ ಸಚಿವನಿಗೆ ಇಡಿ ಶಾಕ್: ಕೆ. ಪೊನ್ಮುಡಿ ಮನೆ ಸೇರಿ 9 ಸ್ಥಳಗಳಲ್ಲಿ ಶೋಧ

ತಮಿಳುನಾಡಿನಲ್ಲಿ ಮತ್ತೊಬ್ಬ ಸಚಿವನಿಗೆ ಇಡಿ ಶಾಕ್: ಕೆ. ಪೊನ್ಮುಡಿ ಮನೆ ಸೇರಿ 9 ಸ್ಥಳಗಳಲ್ಲಿ ಶೋಧ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಮನೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ.

ಚೆನ್ನೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ. ಅವರ ಪುತ್ರ ಹಾಗೂ ಸಂಸದ ಗೌತಮ್ ಸಿಗಮಣಿ ಅವರ ಮನೆಯಲ್ಲೂ ಹುಡುಕಾಟ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಪೊನ್ಮುಡಿ ಅವರಿಗೆ ಸೇರಿದ 9 ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದ್ದು, ಕೇಂದ್ರ ಭದ್ರತಾ ಪಡೆ ಜತೆಗೆ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಎರಡು ತಿಂಗಳ ಅವಧಿಯಲ್ಲಿ ತಮಿಳುನಾಡು ಸಚಿವರೊಬ್ಬರ ಮೇಲೆ ಕೇಂದ್ರೀಯ ಸಂಸ್ಥೆ ನಡೆಸಿದ ಎರಡನೇ ಶೋಧ ಇದಾಗಿದೆ. ಜೂನ್ 13 ರಂದು ನಗದು ಹಗರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿ ಮೇಲೆ ಇಡಿ ದಾಳಿ ನಡೆಸಿ ನಂತರ ಅವರನ್ನು ಬಂಧಿಸಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular