HomeKarnatakaವಾಲ್ಮೀಕಿ ನಿಗಮ ಹಗರಣ: ಇಡಿ ವಶಕ್ಕೆ ಪ್ರಮುಖ ಆರೋಪಿ ಸತ್ಯನಾರಾಯಣ: ಹೈಕೋರ್ಟ್ ಆದೇಶ

ವಾಲ್ಮೀಕಿ ನಿಗಮ ಹಗರಣ: ಇಡಿ ವಶಕ್ಕೆ ಪ್ರಮುಖ ಆರೋಪಿ ಸತ್ಯನಾರಾಯಣ: ಹೈಕೋರ್ಟ್ ಆದೇಶ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯ ವಶಕ್ಕೆ ನೀಡುವಂತೆ ಎಸ್ಐಟಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಸತ್ಯನಾರಾಯಣ ವರ್ಮಾ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿದೆ.

ಸತ್ಯನಾರಾಯಣ ಅವರ ಎಸ್ಐಟಿ ಕಸ್ಟಡಿ ಅವಧಿ ಆಗಸ್ಟ್ 12ರಂದು ಸಂಜೆ ಮುಕ್ತಾಯವಾಗಲಿದೆ, ಆ. 13 ರಿಂದ ಅವರನ್ನು ಇಡಿ ವಶಕ್ಕೆ ಒಪ್ಪಿಸುವ ಸಂಬಂಧ ತನಿಖಾಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕೆಂದು ಹೈಕೋರ್ಟ್ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular