ಮಂಡ್ಯ: ಕಾಲೇಜಿಗೆ ರಜೆ ಎಂದು ಎಡಮುರಿ ಫಾಲ್ಸ್ ನೋಡಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಲಾಪಾಗಿರುವ ಘೋರ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಎಡಮುರಿ ಫಾಲ್ಸ್ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಶ್ಯಾಮ್ (20) ಹಾಗೂ ವೆಂಕಟೇಶ್ (20) ಮೃತ ವಿದ್ಯಾರ್ಥಿಗಳು.
ಇಬ್ಬರೂ ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ವಿದ್ಯಾರ್ಥಿಗಳು. ನಿನ್ನೆ ಕಾಲೇಜಿಗೆ ರಜೆ ಇದ್ದ ಕಾರಣಕ್ಕೆ ಎಡಮುರಿ ಫಾಲ್ಸ್ ನೋಡಲು ಹೋಗಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಈಜಲೆಂದು ಇಳಿದಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ.
ಕೆ.ಆರ್. ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನದಿಯಲ್ಲಿ ವಿದ್ಯಾರ್ಥಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.