HomeLatest Newsಶಾಲೆಗಳ ಮಾನ್ಯತೆ ನವೀಕರಣಕ್ಕೆ ಶಿಕ್ಷಣ ಇಲಾಖೆ ಅವಕಾಶ

ಶಾಲೆಗಳ ಮಾನ್ಯತೆ ನವೀಕರಣಕ್ಕೆ ಶಿಕ್ಷಣ ಇಲಾಖೆ ಅವಕಾಶ

ಬೆಂಗಳೂರು: ಶಾಲೆಗಳ ಮಾನ್ಯತೆ ನವೀಕರಣಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಅವಕಾಶ ಕಲ್ಪಿಸಲಾಗಿದೆ. 2023 -24 ನೇ ಸಾಲಿನಲ್ಲಿ ಮತ್ತು ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಮಾನ್ಯತೆ ನವೀಕರಿಸಿಕೊಳ್ಳದ ಖಾಸಗಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾನ್ಯತೆ ನವೀಕರಣ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯಿಂದ ಅವಕಾಶ ಕಲ್ಪಿಸಲಾಗಿದೆ.

ಒಂದು ಬಾರಿಗೆ ಮಾತ್ರ ಮಾನ್ಯತೆ ನವೀಕರಣದ ಷರತ್ತು ವಿಧಿಸಿ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಈ ಅವಕಾಶ ಬಳಸಿಕೊಂಡು ಶಾಲೆ ಆಡಳಿತ ಮಂಡಳಿಗಳು ಬಾಕಿ ಇರುವ ಅವಧಿಗೆ ಘಟನೋತ್ತರ ಮಾನ್ಯತೆ ಪಡೆಯಲು ಕ್ರಮವಹಿಸುವಂತೆ ತಿಳಿಸಲಾಗಿದೆ. ಈ ಅವಧಿಯ ನಂತರವೂ ಪ್ರಥಮ ಮಾನ್ಯತೆ ನವೀಕರಣ ಪಡೆಯದ ಖಾಸಗಿ ಶಾಲೆಗಳಿಗೆ ನೋಂದಣಿ ರದ್ದುಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

 ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೈಪಿಡಿಯನ್ನು ಮಾನ್ಯತೆ ನವೀಕರಣ ತಂತ್ರಾಂಶದ ಲಾಗಿನ್ ಪುಟದಲ್ಲಿ ಅಳವಡಿಸಲಾಗಿದೆ. ಅರ್ಜಿ ಸಲ್ಲಿಕೆ ಮತ್ತು ಪರಿಶೀಲನೆ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಉಂಟಾದಲ್ಲಿ ಅಗತ್ಯ ಮಾಹಿತಿಗಳೊಂದಿಗೆ ಸಮಸ್ಯೆಯನ್ನು ಇ-ಮೇಲ್([email protected]) ಮೂಲಕ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 28 ರಿಂದ ಮೇ 13 ರವರೆಗೆ ಅರ್ಜಿ ಸಲ್ಲಿಸಲು ಸಮಯ ನೀಡಲಾಗಿದೆ. ಸ್ವೀಕರಿಸಿದ ಅರ್ಜಿಗಳನ್ನು ಇತ್ಯರ್ಥಪಡಿಸಲು ಜೂನ್ 17 ಕೊನೆಯ ದಿನವಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular