HomeKarnatakaಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಇನ್ನೂ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭ

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಇನ್ನೂ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಇನ್ನೂ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಆಂಗ್ಲ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ 2024 -25 ನೇ ಸಾಲಿನಲ್ಲಿ 2000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿತ್ತು. ಮೊದಲ ಹಂತದಲ್ಲಿ 1419 ಸರ್ಕಾರಿ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಮತ್ತು ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ಆರಂಭಿಸಲು ಸೂಚಿಸಲಾಗಿದೆ.

ಅಗತ್ಯವಿರುವ ಶಿಕ್ಷಕರು, ಅತಿಥಿ ಉಪನ್ಯಾಸಕರ ಸೇವೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಜನಪ್ರತಿನಿಧಿಗಳು, ಪೋಷಕರು, ಶಾಲಾ ಅಭಿವೃದ್ಧಿ ಸಮಿತಿಗಳು, ಅಧಿಕಾರಿಗಳಿಂದ ಆಂಗ್ಲ ಭಾಷಾ ಮಾಧ್ಯಮ ಬೋಧನೆಗೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಇನ್ನು ಹೆಚ್ಚಿನ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ವಲಯದಲ್ಲಿ 126, ಧಾರವಾಡ ವಲಯದಲ್ಲಿ 165, ಮೈಸೂರು ವಲಯದಲ್ಲಿ 82 ಶಾಲೆಗಳನ್ನು ಆರಂಭಿಸಲಾಗುವುದು. ಬೆಂಗಳೂರು ನಗರಕ್ಕೆ ನಾಲ್ಕು ಶಾಲೆ ನೀಡಲಾಗಿದ್ದು ಉಳಿದ 122 ಶಾಲೆಗಳನ್ನು ಕೋಲಾರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular