HomeKarnatakaBIG NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಅನಧಿಕೃತ ವಸತಿ ನಿಲಯಗಳು ಟ್ಯುಟೋರಿಯಲ್ ಗಳ ಬಗ್ಗೆ...

BIG NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಅನಧಿಕೃತ ವಸತಿ ನಿಲಯಗಳು ಟ್ಯುಟೋರಿಯಲ್ ಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ಅನಧಿಕೃತ ವಸತಿನಿಲಯಗಳು ಟ್ಯುಟೋರಿಯಲ್ ಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು  ಶಿಕ್ಷಣ ಇಲಾಖೆ  ಸೂಚನೆ ನೀಡಿದೆ.

ಕೆಲವು ಜಿಲ್ಲೆಗಳಲ್ಲಿ ಶಾಲೆ ನಡೆಸಲು ಅನುಮತಿ ಪಡೆದು ಕೆಲವು ಶಾಲಾ ಆಡಳಿತ ಮಂಡಳಿಗಳು ಅನಧಿಕೃತವಾಗಿ ಶಾಲಾ ಆವರಣದಲ್ಲಿ ವಸತಿ ನಿಲಯ ಮತ್ತು ಟ್ಯುಟೋರಿಯಲ್ಗಳನ್ನು ನಡೆಸುತ್ತಿರುವುದು ಕಂಡುಬಂದಿರುತ್ತದೆ. ಈ ರೀತಿ ಅನಧಿಕೃತವಾಗಿ ನಡೆಸುತ್ತಿರುವ ವಸತಿ ನಿಲಯಗಳು/ಟ್ಯುಟೋರಿಯಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅವಘಡ ಸಂಭವಿಸದಂತೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಶಾಲೆ ನಡೆಸಲು ಅನುಮತಿ ಪಡೆದು ಅನಧಿಕೃತವಾಗಿ ವಸತಿ ನಿಲಯ ಮತ್ತು ಟ್ಯುಟೋರಿಯಲ್ಗಳನ್ನು ನಡೆಸುತ್ತಿರುವ ಬಗ್ಗೆ ತಮ್ಮ ಜಿಲ್ಲಾ ವ್ಯಾಪ್ತಿಯ ಖಾಸಗಿ ಶಾಲೆಗಳಲ್ಲಿ ತಕ್ಷಣ ಪರಿಶೀಲಿಸಿ 03 ದಿನಗಳೊಳಗಾಗಿ ಈ ಕಚೇರಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳೊಂದಿಗೆ ವರದಿ ಸಲ್ಲಿಸಲು ಸೂಚಿಸಿದೆ. ಈ ರೀತಿ ಅನಧಿಕೃತವಾಗಿ ಟ್ಯುಟೋರಿಯಲ್ಗಳು ಮತ್ತು ವಸತಿ ನಿಲಯಗಳನ್ನು ನಡೆಸುತ್ತಿರುವ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ನಿಯಮಾನುಸಾರ ಅಗತ್ಯ ಕ್ರಮವಹಿಸಲು ಸೂಚಿಸಿದೆ.

ಅನಧಿಕೃತವಾಗಿ ನಡೆಸಲಾಗುತ್ತಿರುವ ವಸತಿ ನಿಲಯಗಳು ಅಥವಾ ಟ್ಯುಟೋರಿಯಲ್ಗಳಲ್ಲಿ ಯಾವುದೇ ಅವಘಡ ಉಂಟಾದಲ್ಲಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೇಶಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular