HomeKarnatakaBREAKING : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 'ಆಂಗ್ಲ ಮಾಧ್ಯಮ' ತರಗತಿಗಳನ್ನು ಆರಂಭಿಸಲು 'ಶಿಕ್ಷಣ...

BREAKING : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿಗಳನ್ನು ಆರಂಭಿಸಲು ‘ಶಿಕ್ಷಣ ಇಲಾಖೆ’ ಗ್ರೀನ್ ಸಿಗ್ನಲ್

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಹಾಲಿ ಇರುವ ಕನ್ನಡ /ಇತರೆ ಮಾಧ್ಯಮದ ಜೊತೆಗೆ ಆಂಗ್ಲ [ದ್ವಿಭಾಷಾ (Bilingual)] ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ (ದ್ರಿಭಾಷಾ) ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಉಲ್ಲೇಖ- 1ರನ್ವಯ ಮೊದಲನೇ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದರಂತೆ ಈಗಾಗಲೇ ರಾಜ್ಯದ್ಯಂತ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಅನುಷ್ಠಾನಗೊಳಿಸಲಾಗಿರುತ್ತದೆ.ಪ್ರಸ್ತುತ ಎರಡನೇ ಹಂತದಲ್ಲಿ ರಾಜ್ಯಾದ್ಯಂತ 373 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವ ಸಂಬಂಧ ಉಲ್ಲೇಖ-2ರನ್ವಯ ಏಕಕಡತದ ಮೂಲಕ ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ.

ಅದರಂತೆ ಸರ್ಕಾರವು 2024-25ನೇ ಸಾಲಿನಿಂದ ಉಲ್ಲೇಖಿತ-3ರ ಆದೇಶದ ಅನುಬಂಧದಲ್ಲಿನ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ: ಇಡಿ 109 ಯೋಯೋಕ 2018 ದಿನಾಂಕ: 18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿಸಿ ಆದೇಶಿಸಲಾಗಿರುತ್ತದೆ. (
ಸದರಿ ಆದೇಶದಲ್ಲಿನ ಅಂಶಗಳನ್ನಯ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular