HomeLatest NewsBIG NEWS : ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ : CM ಸಿದ್ದರಾಮಯ್ಯ ನೀಡಿದ...

BIG NEWS : ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ : CM ಸಿದ್ದರಾಮಯ್ಯ ನೀಡಿದ ಸೂಚನೆಗಳು ಹೀಗಿದೆ.!

ಬೆಂಗಳೂರು : ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಹಾಗೂ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕೆಲವು ಸೂಚನೆಗಳನ್ನು ನೀಡಿದರು.

ಡ್ರಾಪ್ಔಟ್ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐ ಗಳು, ಬಿಇಒ ಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರೆಯೇ? ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು.

ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್ ಸೂಪು, ಹಾಸ್ಟೆಲ್ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ? ಇದನ್ನು ಸುಧಾರಿಸುವ ನಿಟ್ಟಿನಲ್ಲಿ ನಿಮ್ಮ ಪ್ರಾಯೋಗಿಕ ಅನುಭವಗಳು ಏನು?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ. ಡಿಡಿಪಿಐ ಗಳು ಜಿಲ್ಲಾಕೇಂದ್ರದಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆಯ ಪ್ರಯಾಣ ಮಾಡಬೇಕು. ಸಿಇಒ ಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾ ವಹಿಸಿ ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಲೇಬೇಕು.

ಎಸ್ಎಸ್ಎಲ್ಸಿ ಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬರುತ್ತಿದೆ. ಬೇರೆ ಜಿಲ್ಲೆಗಳು ಏಕೆ ಹಿಂದುಳಿದಿವೆ?

ಡಿಡಿಪಿಐಗಳು ಫಲಿತಾಂಶದ ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಡಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಬೇಕು.

ಶಿಕ್ಷಕರು ಮತ್ತು ಡಿಡಿಪಿಐ ಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ. ಇದನ್ನು ಬಿಟ್ಟು ಇಲ್ಲಸಲ್ಲದ ನೆಪ ಹೇಳಬೇಡಿ.

ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆ ತಕ್ಷಣ ತಕ್ಷಣ ಸಿದ್ದಪಡಿಸಬೇಕು. ಹಣ ಬಿಡುಗಡೆ ಆಗಿದ್ದರೂ ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳು ಉತ್ತರಿಸಬೇಕು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular