ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ, ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ: ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶ ಹೆಚ್ಚಳಕ್ಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಐದು ಅಂಶಗಳ ಮಾರ್ಗಸೂಚಿ ಒಳಗೊಂಡ ಸುತ್ತೋಲೆ ಹೊರಡಿಸಿದ್ದಾರೆ.

ಶಿಕ್ಷಕರು, ಮುಖ್ಯ ಶಿಕ್ಷಕರನ್ನು ಶಾಲಾ ದಿನಗಳಲ್ಲಿ ಯಾವುದೇ ಸಭೆ ಸಮಾರಂಭ ಕಾರ್ಯಗಾರಗಳಿಗೆ ನಿಯೋಜಿಸಬಾರದು.

ಶಾಲಾ ಅವಧಿಯಲ್ಲಿ ಶಿಕ್ಷಕರೊಂದಿಗೆ ಸಭೆ, ವಿಡಿಯೋ ಕಾನ್ಫರೆನ್ಸ್ ನಡೆಸಬಾರದು.

ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಸೇರಿ ಯಾವುದೇ ಬಾಹ್ಯ ಪರೀಕ್ಷೆಗಳನ್ನು ಕೂಡ ಶಾಲಾ ದಿನಗಳಲ್ಲಿ ಶಾಲಾ ಅವರಣದಲ್ಲಿ ನಡೆಸಬಾರದು. ಪರೀಕ್ಷೆ ನಡೆಸುವ ಅವಕಾಶವನ್ನು ಸಾರ್ವಜನಿಕ ರಜೆ ಅಥವಾ ಬೇಸಿಗೆ ರಜೆ ಸಮಯದಲ್ಲಿ ಮಾತ್ರ ನಿಯಮಗಳಂತೆ ನೀಡಬೇಕು.

ಶಾಲಾ ಅವಧಿಯಲ್ಲಿ ಮಕ್ಕಳನ್ನು ಹೊರಗಡೆಯ ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಕರೆದುಕೊಂಡು ಹೋಗಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read