HomeLatest Newsರಾಜ್ಯದಲ್ಲಿ 'SSLC' ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ 'ಮಸ್ತ್ ಪ್ಲ್ಯಾನ್ ': ಸಂಜೆ 7...

ರಾಜ್ಯದಲ್ಲಿ ‘SSLC’ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ‘ಮಸ್ತ್ ಪ್ಲ್ಯಾನ್ ‘: ಸಂಜೆ 7 ಕ್ಕೆ ಮೊಬೈಲ್ , ಟಿವಿ ಬಂದ್.!


ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಶಿಕ್ಷಣ ಇಲಾಖೆಯು ಅತ್ಯಂತ ವಿಭಿನ್ನ ಮತ್ತು ಕಟ್ಟುನಿಟ್ಟಿನ ಯೋಜನೆಯೊಂದನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಮೊಬೈಲ್ ಮತ್ತು ಟಿವಿಯ ಗೀಳಿಗೆ ಬಿದ್ದು ಓದಿನಿಂದ ದೂರವಾಗುತ್ತಿರುವುದನ್ನು ತಡೆಯಲು ಈಗ ‘ಡಂಗೂರ’ ಸದ್ದು ಮೊಳಗಲಿದೆ!

ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಏಕಾಗ್ರತೆಯಿಂದ ಓದಲಿ ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯು ವಿಶೇಷ ಸುತ್ತೋಲೆಯನ್ನು ಹೊರಡಿಸಿದೆ. ಸದ್ಯ ಶಿಕ್ಷಣ ಇಲಾಖೆ ಬಿಇಒ ಹಂತದಲ್ಲಿ ಈ ಕುರಿತು ಸೂಚನೆ ನೀಡಿದ್ದು, ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿಲ್ಲ.

ಸಂಜೆ 7 ರಿಂದ 9 ‘ನೋ ಮೊಬೈಲ್’: ಪ್ರತಿದಿನ ಸಂಜೆ ಸರಿಯಾಗಿ 7 ಗಂಟೆಯಿಂದ 9 ಗಂಟೆಯವರೆಗೆ ವಿದ್ಯಾರ್ಥಿಗಳು ಮಾತ್ರವಲ್ಲದೆ, ಮನೆಯವರೂ ಕೂಡ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಮತ್ತು ಟಿವಿ ಬಳಸದಂತೆ ಜಾಗೃತಿ ಮೂಡಿಸಲಾಗುತ್ತದೆ.ಹಳ್ಳಿಗಳಲ್ಲಿ ಮತ್ತು ವಾರ್ಡ್ಗಳಲ್ಲಿ ಡಂಗೂರ ಬಾರಿಸುವ ಮೂಲಕ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಓದಿನ ಕಡೆಗೆ ಗಮನ ಹರಿಸುವಂತೆ ಸೂಚನೆ ನೀಡಲು ಇಲಾಖೆ ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊಬೈಲ್ ಗೀಳಿಗೆ ಬ್ರೇಕ್: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮತ್ತು ಗೇಮ್ಗಳ ಹಾವಳಿಯಿಂದ ವಿದ್ಯಾರ್ಥಿಗಳು ಪುಸ್ತಕ ಹಿಡಿಯುವುದನ್ನೇ ಮರೆಯುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಈ ‘ಸಂಜೆ ಓದಿನ ಸಮಯ’ವನ್ನು ಕಡ್ಡಾಯಗೊಳಿಸಲು ಮುಂದಾಗಿದೆ.ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಈ ಎರಡು ಗಂಟೆಗಳ ಕಾಲ ಮೊಬೈಲ್ ಮತ್ತು ಟಿವಿಯಿಂದ ದೂರವಿರಿ” ಎಂಬ ಸಂದೇಶವನ್ನು ಪ್ರತಿ ಮನೆ ಮನೆಗೆ ತಲುಪಿಸುವುದು ಈ ಯೋಜನೆಯ ಗುರಿಯಾಗಿದೆ.

ಶಿಕ್ಷಣ ಇಲಾಖೆಯ ಈ ದಿಟ್ಟ ಕ್ರಮದಿಂದ ಈ ಬಾರಿ SSLC ಫಲಿತಾಂಶದಲ್ಲಿ ಗಣನೀಯ ಸುಧಾರಣೆ ಕಂಡುಬರುವ ನಿರೀಕ್ಷೆಯಿದೆ. ಪೋಷಕರು ಕೂಡ ಈ ಯೋಜನೆಗೆ ಸಾಥ್ ನೀಡುವಂತೆ ಇಲಾಖೆ ಮನವಿ ಮಾಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular