HomeKarnatakaಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟಕಡೆಯ ಜನರ ಬಗ್ಗೆ ಬದ್ಧತೆ ಇರಲಿ: ಸಿಎಂ ಸಿದ್ಧರಾಮಯ್ಯ

ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟಕಡೆಯ ಜನರ ಬಗ್ಗೆ ಬದ್ಧತೆ ಇರಲಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿ, ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ಅಧಿಕಾರಿಗಳು ಬದ್ಧತೆ ತೋರಿಸಬೇಕು. ಅಂಬೇಡ್ಕರ್ ಅವರ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀನಿ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿ ಆಹಾರ, ಶಿಕ್ಷಣ, ಮಾಹಿತಿ ಹಕ್ಕುಗಳನ್ನು ಕಡ್ಡಾಯ ಮಾಡುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಜನರ ಹಕ್ಕುಳನ್ನಾಗಿ ಮಾಡಿದರು. ಇವೆಲ್ಲವೂ ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ಉದ್ದೇಶವನ್ನೇ ಹೊಂದಿವೆ. ಆದ್ದರಿಂದ ಮಧ್ಯವರ್ತಿಗಳೇ ಇಲ್ಲದ ನಮ್ಮ ಗ್ಯಾರಂಟಿಗಳನ್ನು ಮನೆ ಮನೆ ತಲುಪಿಸಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಬೇಡ್ಕರ್ ಅವರಿಂದ ಬುದ್ದ, ಬಸವ, ಗಾಂಧಿ ಎಲ್ಲರೂ ಸಮಾಜದ ಸಮಾನತೆಗಾಗಿ, ತಾರತಮ್ಯದ ಸಮಾಜದ ಬದಲಾವಣೆಗಾಗಿ ಶ್ರಮಿಸಿದರು. ಆದರೂ ಇನ್ನೂ ಅಸಮಾನತೆ ಹೋಗಿಲ್ಲ ಎಂದರೆ ಎಲ್ಲರಿಗೂ ಸಮಾನ ಅವಕಾಶ ಸಿಗದೇ ಇರುವುದೇ ಮುಖ್ಯ ಕಾರಣ. ಆದ್ದರಿಂದ ಸಮಾಜದಲ್ಲಿ ಪಟ್ಟಭದ್ರರು ಇನ್ನೂ ಹೆಚ್ಚಾಗಿದ್ದಾರೆ ಎಂದರು.

ಸೂಟು ಬೂಟು ಹಾಕಿಕೊಂಡು ಬರುವವರನ್ನು ಕುರ್ಚಿಯಲ್ಲಿ ಕೂರಿಸಿ ಮಾತನಾಡಿಸುವುದನ್ನು, ಮಾಸಲು ಬಟ್ಟೆಯಲ್ಲಿ ಬರುವ ಬಡವರನ್ನು ನಿರ್ಲಕ್ಷ್ಯದಿಂದ ಕಾಣುವುದು ನಮ್ಮ ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಕಿತ್ತೊಗೆದು ಪ್ರತಿಯೊಬ್ಬರಿಗೂ ಸಮಾಜದಲ್ಲಿ ಅವಕಾಶಗಳು ಸಿಗುವಂತೆ ನೋಡಿಕೊಳ್ಳಬೇಕು. ಎಲ್ಲಿಯವರೆಗೂ ಜಾತಿ, ವರ್ಗ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಅಸಮಾನತೆ ಇರುತ್ತದೆ ಎಂದು ಹೇಳಿದ್ದಾರೆ.

ಕೆಎಎಸ್ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕೆಎಎಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ, ಸೇವೆ ಮುಖ್ಯ. ಕೆಎಎಸ್ ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular