ಬಳ್ಳಾರಿ : ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಅಕ್ಟೋಬರ್ 27 ರಂದು ಬೆಳಿಗ್ಗೆ 8 ಗಂಟೆಯಿಂದ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ ಸಭಾಂಗಣದಲ್ಲಿ ನಡೆಯಲಿದೆ.
ಮತ ಎಣಿಕೆ ಕೇಂದ್ರಕ್ಕೆ ಬೆಂಕಿ ಪೊಟ್ಟಣ, ಲೈಟರ್, ಫೌಂಟೇನ್ ಇಂಕ್ ಪೇನ್, ಮೊಬೈಲ್ ಫೋನ್, ಸಿಗರೇಟ್, ಪಾನ, ಬೀಡಾ ತಂಬಾಕು, ನೀರಿನ ಬಾಟಲ್ ಕೊಂಡೊಯ್ಯುವುದನ್ನು ನಿಷೇಧಿಸಿ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ಆದೇಶಿಸಿದ್ದಾರೆ.
ಇದಲ್ಲದೆ ಮತ ಎಣಿಕೆ ದಿನದಂದು ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಖಾಸಗಿ ವಾಹನಗಳ ಪ್ರವೇಶವನ್ನು (ಅಭ್ಯರ್ಥಿ ಹಾಗೂ ಪತ್ರಕರ್ತರನ್ನು ಹೊರತುಪಡಿಸಿ) ಸಹ ನಿಷೇಧಿಸಲಾಗಿದೆ.
ಶಿವಮೊಗ್ಗದಲ್ಲಿ ಅಕ್ಟೋಬರ್ 08 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
ಶಿವಮೊಗ್ಗ, :ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 08 ರಂದು ಬೆಳಿಗ್ಗೆ 10 ಗಂಟೆಗೆ “ನೇರ ಸಂದರ್ಶನ’ವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಇಟಾಚಿ ಕ್ಯಾಶ್ ಮ್ಯಾನೇಜ್‌ಮೆಂಟ್ ಸರ್ವಿಸ್ ಪ್ರೈ.ಲಿ., ಖಾಸಗಿ ಕಂಪನಿ ಭಾಗವಹಿಸಲಿದ್ದು, ಉದ್ಯೋಗ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.
ದಿನಾಂಕ: 08-10-2026 ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು
ಎಸ್ ಎಸ್ ಎಲ್ ಸಿ, ಪಿಯುಸಿ, ಮತ್ತು ಯಾವುದೇ ಪದವಿ ಪಡೆದಿರುವ 18 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606/9108235132 ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಿಂದ ರಾಯಚೂರು ಜಿಲ್ಲಾ ಪ್ರವಾಸ
ರಾಯಚೂರು : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಅಕ್ಟೋಬರ್ 8ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಕ್ಟೋಬರ್ 8ರ ಬೆಳಿಗ್ಗೆ 8.30ಕ್ಕೆ ಹೊಸಪೇಟೆಯನ್ನು ರಸ್ತೆ ಮಾರ್ಗವಾಗಿ ನಿರ್ಗಮಿಸಿ, ಅಂದು ಬೆಳಿಗ್ಗೆ 9ಕ್ಕೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಬರ ಪೀಡಿತ ತಾಲ್ಲೂಕುಗಳ ಬರ ಪೀಡಿತ ಪ್ರದೇಶಗಳ ಸ್ಥಳ ಪರಿಶೀಲನೆ ಮಾಡಿ, ಸಂಜೆ 04ಕ್ಕೆ ಕೊಪ್ಪಳ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ನಂತರ ಸಂಜೆ 6ಕ್ಕೆ ಕೊಪ್ಪಳದಿಂದ ರಸ್ತೆ ಮಾರ್ಗವಾಗಿ ಹುಬ್ಬಳಿ ವಿಮಾನ ನಿಲ್ದಾಣಕ್ಕೆ ತೆರಳಿ, ರಾತ್ರಿ 8.25ರ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳಾದ ಡಾ.ಚನ್ನಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

