ಬೆಂಗಳೂರು : ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ ಹಿನ್ನೆಲೆ ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಹೌದು, ರಾಜ್ಯದ ಸಾರಿಗೆ ಸಂಸ್ಥೆ ನಿಗಮದ ಬಸ್ ಗಳು ಸಂಚರಿಸದೇ ಇರುವ ಕಾರಣ ಸಾರ್ವಜನಿಕರು ಸ್ವಂತ ವಾಹನ ಹಾಗೂ ಆಟೋ, ಟ್ಯಾಕ್ಸಿ, ಕ್ಯಾಬ್ ಹತ್ತಿ ತಮ್ಮ ತಮ್ಮ ಕೆಲಸಕ್ಕೆ ಹೋಗುತ್ತಿದ್ದು, ಪರಿಣಾಮ ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಸಾರ್ವಜನಿಕರು ಗಂಟೆ ಗಂಟ್ಟಲ್ಲೇ ರಸ್ತೆಯಲ್ಲಿ ನಿಂತು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾರಿಗೆ ನೌಕರರ ಮುಷ್ಕರ ಇದ್ರೂ ಶಾಲೆಗಳಿಗೆ ರಜೆ ಘೋಷಿಸಿದ ಹಿನ್ನೆಲೆ ವಿದ್ಯಾರ್ಥಿಗಳು ಪರದಾಡಿದ್ದಾರೆ. ಮುಷ್ಕರದ ಮಾಹಿತಿ ಇಲ್ಲದೇ ಬಂದ ಪ್ರಯಾಣಿಕರು ತೀವ್ರ ಪರದಾಟ ನಡೆಸಿದ್ದಾರೆ.

