HomeKarnatakaಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ : CM ಸಿದ್ದರಾಮಯ್ಯ

ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ : CM ಸಿದ್ದರಾಮಯ್ಯ

ಶಿವಮೊಗ್ಗ :    ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ ಮಾಡಲಾಗುವುದು ಎಂದು   ಸಿಎಂ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ಸಹ ವಾಪಸ್ಸು ಕರೆತರಲಾಗುವುದು. ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ.

ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ಸಹ ವಾಪಸ್ಸು ಕರೆತರಲಾಗುವುದು. ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ. ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಈ ವೇಳೆ ತಾವು ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular