BIG NEWS : ಮಾಜಿ ಸಂಸದ L.R ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ.!

ಬೆಂಗಳೂರು : ಮಾಜಿ ಸಂಸದ L.R   ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ ನಡೆಸಿರುವ ಘಟನೆ ನಡೆದಿದೆ.

ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ಕೆಲವರು ಪೊಲೀಸರ ಕಣ್ತಪ್ಪಿಸಿ ಐದಾರು ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.
ಪೆನ್ ಡ್ರೈವ್ ಪ್ರಕರಣ ಸಂಬಂಧ ಶಿವರಾಮೇಗೌಡರು ಜೆಡಿಎಸ್ ವರಿಷ್ಟರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read