HomeLatest NewsBREAKING: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ: ಮೊಟ್ಟೆಗಳ ಮಾದರಿ ಸಂಗ್ರಹಿಸಿ ಪರೀಕ್ಷಿಸಲು ಆರೋಗ್ಯ ಸಚಿವ...

BREAKING: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ: ಮೊಟ್ಟೆಗಳ ಮಾದರಿ ಸಂಗ್ರಹಿಸಿ ಪರೀಕ್ಷಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು: ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಆತಂಕ ಸೃಷ್ಟಿಸಿದೆ.

ಜನಪ್ರಿಯ ಬ್ರ್ಯಾಂಡ್ ಗಳ ಮೊಟ್ಟೆಗಳಲ್ಲಿ AOZ-ನೈಟ್ರೋಫ್ಯುರಾನ್ ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇದು ಅಪಾಯಕಾರಿ ಅಂಶವಾಗಿದ್ದು, ಮನುಷ್ಯನ ಡಿಎನ್ ಎ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೇ ಮನುಷ್ಯನಲ್ಲಿ ರೋಗನಿರೋಧಕ ಶಕ್ತಿಯನ್ನು ಕುಂದಿಸುತ್ತದೆ ಎನ್ನಲಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ತೀವ್ರ ಚರ್ಚೆಯಾಗುತ್ತಿದ್ದು, ಮೊಟ್ಟೆ ಪ್ರಿಯರು ಶಾಕ್ ಆಗಿದ್ದಾರೆ.

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಚರ್ಚೆ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮೇರೆಗೆ ಮೊಟ್ತೆಗಳ ಪರೀಕ್ಷೆಗೆ ಸೂಚಿಸಿದ್ದರು. ವರದಿಯಲ್ಲಿ ಯಾವುದೇ ಅಪಾಯಕಾರಿ ಅಂಶ ಪತ್ತೆಯಾಗಿರಲಿಲ್ಲ. ಆದರೆ ಇತ್ತೀಚೆಗೆ ಮೊಟ್ಟೆಯಲ್ಲಿ ವಿಷಕಾರಿ ಅಂಶ ಪತ್ತೆ ಚರ್ಚೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವರು, ಎಲ್ಲಾ ರೀತಿಯ ಮೊಟ್ಟೆಗಳ ಮಾದರಿ ಸಂಗ್ರಹಿಸಿ ಲ್ಯಾಬ್ ಗಳಿಗೆ ಕಳುಹಿಸಿ ಕೂಲಂಕುಷವಾಗಿ ಪರೀಕ್ಷೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಿಸಲಾಗುವುದು. ಒಂದು ವೇಳೆ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದಲ್ಲಿ ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಲ್ಲಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular