HomeKarnatakaರಜಾ ದಿನ ಹೊರತುಪಡಿಸಿ ಎಲ್ಲಾ ದಿನಗಳಲ್ಲಿಯೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ: ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿದ...

ರಜಾ ದಿನ ಹೊರತುಪಡಿಸಿ ಎಲ್ಲಾ ದಿನಗಳಲ್ಲಿಯೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ: ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿದ ಅಜೀಂ ಪ್ರೇಮ್ ಜೀ ಫೌಂಡೇಷನ್ 1500 ಕೋಟಿ ರೂ. ದೇಣಿಗೆ

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ ಪೂರೈಕೆ ಮಾಡಲು ಅಜೀಂ ಪ್ರೇಮ್ ಜೀ ಫೌಂಡೇಶನ್ ಕೈಜೋಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಗೆ ಸಹಕಾರ ನೀಡಲಿದೆ.

ಅಪೌಷ್ಟಿಕತೆ ನಿವಾರಣೆಗೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲಾಗುತ್ತಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಶೇಂಗಾ ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಜಾ ದಿನ ಹೊರತುಪಡಿಸಿ ವಾರದ ಎಲ್ಲಾ ಶಾಲಾ ದಿನಗಳಲ್ಲಿ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಈ ಯೋಜನೆಗೆ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ ಜೀ ನೆರವು ನೀಡಲಿದ್ದಾರೆ.

ಅಜೀಂ ಪ್ರೇಮ್ ಜೀ ಫೌಂಡೇಶನ್ ಮೂಲಕ 1500 ಕೋಟಿ ರೂ. ದೇಣಿಗೆ ನೀಡುತ್ತಿದ್ದು, ವಾರದಲ್ಲಿ 4 ದಿನಗಳ ಮೊಟ್ಟೆ ವೆಚ್ಚವನ್ನು ಭರಿಸಲಿದೆ. 2 ದಿನಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 42.57 ಲಕ್ಷ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುತ್ತಿದೆ. ಒಂದು ಮಟ್ಟಿಗೆ ಆರು ರೂಪಾಯಿ ದರ ನಿಗದಿ ಮಾಡಿದ್ದು, ಶಾಲಾ ಶಿಕ್ಷಣ ಇಲಾಖೆಯಿಂದ ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಶಾಲಾ ಅಭಿವೃದ್ಧಿ ಸಮಿತಿ ಜಂಟಿ ಖಾತೆಗೆ ಹಣ ಜಮಾ ಮಾಡಲಾಗುವುದು. ಅದರಲ್ಲಿ ಮೊಟ್ಟೆ ಬೇಯಿಸಲು ಇಂಧನ ವೆಚ್ಚ 30 ಪೈಸೆ, ಮೊಟ್ಟೆ ಸುಲಿದು ಕೊಡುವ ಬಿಸಿಯೂಟ ತಯಾರಕರಿಗೆ 30 ಪೈಸೆ, ಸಾಗಾಣೆ ವೆಚ್ಚ 20 ಪೈಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 20ರಂದು ಒಪ್ಪಂದ ಮಾಡಿಕೊಳ್ಳಲಿದ್ದು, ಆಗಸ್ಟ್ 1ರಿಂದ ಯೋಜನೆ ಜಾರಿಯಾಗುತ್ತಿದೆ. 8.12 ಲಕ್ಷ ಮಕ್ಕಳಿಗೆ ಚಿಕ್ಕಿ, ಬಾಳೆಹಣ್ಣು ವಿತರಿಸಲಾಗುವುದು. 1.27 ಲಕ್ಷ ಮಕ್ಕಳು ಯಾವುದೇ ಬೇಡಿಕೆ ಸಲ್ಲಿಸಿಲ್ಲ. ಮೂರು ವರ್ಷಗಳವರೆಗೆ ಒಪ್ಪಂದ ಜಾರಿಯಲ್ಲಿರುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular