HomeKarnatakaವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: 9, 10 ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆ

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: 9, 10 ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆ

ಬೆಂಗಳೂರು: ಒಂದರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆ ಯಶಸ್ವಿಯಾಗಿದ್ದು, 9 ಮತ್ತು 10ನೇ ತರಗತಿ ಮಕ್ಕಳಿಗೂ ಮೊಟ್ಟೆ ನೀಡುವ ಯೋಜನೆ ವಿಸ್ತರಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದಕ್ಕಾಗಿ ಆರ್ಥಿಕ ಇಲಾಖೆ ಅನುಮತಿ ಕೋರಲಾಗಿದೆ.

ಶಿಕ್ಷಣ ಇಲಾಖೆ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡುವ ಯೋಜನೆ ವಿಸ್ತರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡಲು 300 ಕೋಟಿ ರೂ. ಅವಶ್ಯಕತೆ ಇದ್ದು, ಮುಂದಿನ ವರ್ಷದಿಂದ 9 ಮತ್ತು 10ನೇ ತರಗತಿ ಮಕ್ಕಳಿಗೂ ಮೊಟ್ಟೆ ನೀಡಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸ್ತಾವನೆಗೆ ಮೌಖಿಕವಾಗಿ ಸಹಮತ ವ್ಯಕ್ತಪಡಿಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಅನುಮತಿ ಸಿಗಬೇಕಿದೆ. ಮೊಟ್ಟೆ ವಿತರಣೆ ಬಗ್ಗೆ ಮಕ್ಕಳ ಅಭಿಪ್ರಾಯ ಸಂಗ್ರಹಿಸಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 47.97 ಲಕ್ಷ ವಿದ್ಯಾರ್ಥಿಗಳಲ್ಲಿ 38.37 ಲಕ್ಷ ವಿದ್ಯಾರ್ಥಿಗಳು ಮೊಟ್ಟೆ ಬೇಕು ಎಂದು ಹೇಳಿದ್ದಾರೆ. 3.37 ಲಕ್ಷ ವಿದ್ಯಾರ್ಥಿಗಳು ಬಾಳೆಹಣ್ಣು, 2.27 ಲಕ್ಷ ವಿದ್ಯಾರ್ಥಿಗಳು ಚಿಕ್ಕಿ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ.

2021ರ ಡಿಸೆಂಬರ್ ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸಲು ಮೊಟ್ಟೆ ನೀಡುವ ಯೋಜನೆ ಆರಂಭಿಸಿದ್ದು, ನಂತರ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ.  ಮುಂದಿನ ಶೈಕ್ಷಣಿಕ ವರ್ಷದಿಂದ 9, 10 ನೇ ತರಗತಿ ಮಕ್ಕಳಿಗೂ ನೀಡಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular