ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯ ವೇಳೆ ನಿಯಮ ಉಲ್ಲಂಘಿಸಿ ಡಿಜೆ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೋಲಿಸ್ ಠಾಣೆಯಲ್ಲಿ ಆಯೋಜಕರ ವಿರುದ್ಧ ಪ್ರತ್ಯೇಕವಾಗಿ 2 ಕೇಸ್ ಗಳನ್ನು ಪೊಲೀಸರು ದಾಖಲಿಸಿದ್ದಾರೆ.
ಅನುಮತಿ ಪಡೆಯದೇ ವಾಹನಗಳಲ್ಲಿ ಜನರೇಟರ್ ಮತ್ತು ಡಿಜೆ ಸೌಂಡ್ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಹ್ಯಾದ್ರಿ ಕಾಲೇಜು ಸಮೀಪದ ದರ್ಗಾ ಮತ್ತು ಮತ್ತೂರು ಕ್ರಾಸ್ ನಲ್ಲಿ ನಿಯಮ ಉಲ್ಲಂಘಿಸಲಾಗಿದೆ. ಅದೇ ರೀತಿ, ಲಷ್ಕರ್ ಮೊಹಲ್ಲಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡಿಜೆ ಸೌಂಡ್ ಹಾಕಲಾಗಿದೆ. ಈ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆಯೋಜಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

