ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆಯನ್ನು ದಿನಾಂಕ:26.08.2026ರ ಬದಲಾಗಿ ದಿನಾಂಕ:25.08.2026 ರಂದು ನೀಡಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರದ ಅಧಿಸೂಚನೆ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲಾಧಿಕಾರಿ ಅವರ ಪತ್ರದ ಉಲ್ಲೇಖದಂತೆ ಅಧಿಸೂಚನೆಯಲ್ಲಿ ದಿನಾಂಕ:26.08.2026ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯಾದಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿರುತ್ತದೆ.
ಆದರೆ, ಉಲ್ಲೇಖದ ಪತ್ರಗಳಲ್ಲಿನ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ, ಹಾಗೂ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ ಇವರುಗಳ ಕೋರಿಕೆಯಂತೆ, ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ದಿನಾಂಕ:26.08.2026ರ ಬದಲಿಗೆ ದಿನಾಂಕ: 25.08.2026ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ತಿಳಿಸಲು ನಿರ್ದೇಶಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

