HomeLatest Newsವಸತಿ ಶಾಲೆ ಶಿಕ್ಷಕರ ನೇಮಕಾತಿ: ಆಸಕ್ತರಿಗೆ ಇಲ್ಲಿದೆ ಇಲ್ಲಿದೆ ಗುಡ್ ನ್ಯೂಸ್

ವಸತಿ ಶಾಲೆ ಶಿಕ್ಷಕರ ನೇಮಕಾತಿ: ಆಸಕ್ತರಿಗೆ ಇಲ್ಲಿದೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2025-26ನೇ ಸಾಲಿಗೆ ವಿವಿಧ ಹುದ್ದೆಗಳ ಭರ್ತಿಗೆ ಏ.11 ರಂದು ವಾಕ್ ಇನ್ ಇಂಟರ್‌ವ್ಯೂ ಗೆ ಅರ್ಹ ಮತ್ತು  ಅನುಭವವುಳ್ಳ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.

ಅರ್ಹ 21 ರಿಂದ 60 ವರ್ಷ ವಯೋಮಿತಿಗೊಳಪಟ್ಟ, ನವೋದಯ ಅಥವಾ ಕೇಂದ್ರಿಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ವಾಕ್ ಇನ್ ಇಂಟರ್‌ವ್ಯೂ ಅಂದು ಬೆಳಿಗ್ಗೆ 9 ಗಂಟೆಗೆ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ. ಹುದ್ದೆಗಳು ತಾತ್ಕಾಲಿಕ ಆಗಿರುತ್ತವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಸಂದರ್ಶನ ಸಮಯದಲ್ಲಿ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.

ಹುದ್ದೆಗಳು:

ಕನ್ನಡ ಶಿಕ್ಷಕ: ಹುದ್ದೆ 1, ಜೀವಶಾಸ್ತ್ರ ಶಿಕ್ಷಕ: ಹುದ್ದೆ 1, ಇಂಗ್ಲೀಷ್ ಭಾಷೆಯಲ್ಲಿ ತರಬೇತಿ ಪಡೆದ ಶಿಕ್ಷಕ-1, ಕನ್ನಡದಲ್ಲಿ ತರಬೇತಿ ಪಡೆದ ಪದವೀಧರ ಶಿಕ್ಷಕರು-2, ದೈಹಿಕ ಶಿಕ್ಷಕರು(ಪುರುಷ ಮತ್ತು ಮಹಿಳೆ)-01+01 ಮತ್ತು ಹಾಸ್ಟೆಲ್ ವಾರ್ಡನ್-01.

ವಿದ್ಯಾರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular