HomeEntertainmentಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಿರ್ದೇಶಕಿ ಏಕ್ತಾ ಕಪೂರ್

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಿರ್ದೇಶಕಿ ಏಕ್ತಾ ಕಪೂರ್

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕರಾವಳಿ ಜಿಲ್ಲೆಗಳ ದೇವಸ್ಥಾನಗಳಿಗೆ ಬಾಲಿವುಡ್ ನಟ-ನಟಿಯರು, ಕ್ರಿಕೆಟ್ ಆಟಗಾರರ ಭೇಟಿ, ವಿಶೇಷ ಪೂಜೆ ಸುದ್ದಿಯಾಗುತ್ತಲೇ ಇದೆ. ಇದರ ಬೆನ್ನಲ್ಲೇ ಇದೀಗ ಬಾಲಿವುಡ್ ಖ್ಯಾತ ನಿರ್ದೇಶಕಿ ಏಕ್ತಾ ಕಪೂರ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಏಕ್ತಾ ಕಪೂರ್ ಕುಟುಂಬ ಸಮೇತ ಆಗಮಿಸಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿರುವ ಏಕ್ತಾ ಕಪೂರ್ ಹಾಗೂ ಕುಟುಂಬ, ದೇವಸ್ಥಾನ ವತಿಯಿಂದ ದೇವರಿಗೆ ವಿಶೇಷ ವಸ್ತ್ರ ಸಲ್ಲಿಸಿದರು. ಕೆಲ ಕಾಲ ದೇವಾಲಯದಲ್ಲಿ ಕಾಲ ಕಳೆದರು.

ಬಳಿಕ ಶಿಬರೂರಿನ ಕೊಡಮಣಿತ್ತಾಯ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular