HomeKarnatakaಸಿಡಿಲು ಬಡಿದು ರೈತ ಸಾವು: ಅ. 11 ರವರೆಗೆ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಸಿಡಿಲು ಬಡಿದು ರೈತ ಸಾವು: ಅ. 11 ರವರೆಗೆ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಭಾರಿ ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗಿದೆ.

ಹಾಸನ, ಬೆಂಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರಿನಲ್ಲಿ ಅಕ್ಟೋಬರ್ 11 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾವೇರಿಯಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ. ಹನುಮಂತಪ್ಪ ನಿಂಗಪ್ಪ ರಿತ್ತಿ(60) ಮೃತಪಟ್ಟವರು ಎಂದು ಹೇಳಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ವಿವಿಧೆಡೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಚಿಕ್ಕಮರಳಿಹಳ್ಳಿ ಗ್ರಾಮದ ಹನುಮಂತಪ್ಪ ನಿಂಗಪ್ಪ ರಿತ್ತಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಕೃಷಿ ಕಾರ್ಯಕ್ಕಾಗಿ ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದಿಎ. ಹಿರೇಮುಗದೂರು ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಆರು ಆಡುಗಳು ಮೃತಪಟ್ಟಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಅಕ್ಟೋಬರ್ 6ರಂದು ಜೋರು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಮುಂದಿನ ಎರಡು ದಿನ ಮತ್ತು ಕೊಡಗಿನಲ್ಲಿ ಅಕ್ಟೋಬರ್ 6ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಮಂಡ್ಯ, ಮೈಸೂರಿನಲ್ಲಿ ಅಕ್ಟೋಬರ್ 7ರಿಂದ 11ರವರೆಗೆ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2026-27ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ, ಸಿಇಟಿ, ನೀಟ್ ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬ್ಯಾಚುರಲ್ ಆಫ್ ಆರ್ಕಿಟೆಕ್ಟರ್, ಬಿ ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ಸಿಇಟಿ/ನೀಟ್ ಮುಖೇನ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್ https://kmdconline.karnataka.gov.in  ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋರ್ಟ್ ಸೈಜ್), ಸಿಇಟಿ/ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ರೂ.100 ರ ಛಾಪಕಾಗದದಲ್ಲಿ ಇಂಡೆಮಿನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ತಾ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-201449 ನ್ನು ಸಂಪರ್ಕಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್, 15 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular