HomeLatest Newsಖಾಸಗಿ ಫೈನಾನ್ಸ್ ಸಿಬ್ಬಂದಿ ಅಟ್ಟಹಾಸಕ್ಕೆ ಬೀದಿಗೆ ಬಿದ್ದ ವೃದ್ಧ ದಂಪತಿ

ಖಾಸಗಿ ಫೈನಾನ್ಸ್ ಸಿಬ್ಬಂದಿ ಅಟ್ಟಹಾಸಕ್ಕೆ ಬೀದಿಗೆ ಬಿದ್ದ ವೃದ್ಧ ದಂಪತಿ

ಹಾಸನ: ಖಾಸಗಿ ಫೈನಾನ್ಸ್ ಸಿಬ್ಬಂದಿ ಅಟ್ಟಹಾಸಕ್ಕೆ ವೃದ್ಧ ದಂಪತಿ ಬೀದಿಗೆ ಬಿದ್ದಿದ್ದಾರೆ. ಸಾಲ ಕಟ್ಟಿಲ್ಲವೆಂದು ವೃದ್ಧ ದಂಪತಿಯನ್ನು ಫೈನಾನ್ಸ್ ಸಿಬ್ಬಂದಿ ಮನೆಯಿಂದ ಹೊರಗೆ ಹಾಕಿದ್ದಾರೆ.

ಇಕ್ವಿಟಾರ್ ಫೈನಾನ್ಸ್ ಸಿಬ್ಬಂದಿ ದೌರ್ಜನ್ಯದಿಂದ ದಂಪತಿ ಬೀದಿಗೆ ಬಿದ್ದಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊರಟಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಣ್ಣಯ್ಯ(80), ಜಯಮ್ಮ(75) ಅವರನ್ನು ಮನೆಯಿಂದ ಹೊರಹಾಕಿ ಬೀಗ ಹಾಕಲಾಗಿದೆ. ಕೋರ್ಟ್ ಆದೇಶವಿದೆ ಎಂದು ಮನೆಗೆ ಖಾಸಗಿ ಫೈನಾನ್ಸ್ ಸಿಬ್ಬಂದಿ ಬೀಗ ಹಾಕಿದ್ದಾರೆ.

ವೃದ್ಧ ದಂಪತಿಯ ಜಾನುವಾರು ಕೊಟ್ಟಿಗೆಗೂ ಬೀಗ ಹಾಕಲಾಗಿದೆ, 2023 ರಲ್ಲಿ ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಮನೆ ಆಡಮಾನ ಬಿಟ್ಟು ದಂಪತಿ ಖಾಸಗಿ ಫೈನಾನ್ಸ್ ನಿಂದ ಎರಡು ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಒಂದು ವರ್ಷ ಸಾಲದ ಕಂತುಗಳನ್ನು ಪಾವತಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ಸಾಲದ ಕಂತು ಕಟ್ಟಲು ಆಗಿರಲಿಲ್ಲ. ಅವರನ್ನು ಮನೆಯಿಂದ ಹೊರಗೆ ಹಾಕಿರುವುದರಿಂದ ಕೊರೆಯುವ ಚಳಿಯಲ್ಲಿ ಬೀದಿಯಲ್ಲಿಯೇ ದಂಪತಿ ವಾಸ ಮಾಡುತ್ತಿದ್ದು, ಒಂದು ವಾರದಿಂದ ಮನೆಯ ಹೊರಗೆ ದಂಪತಿ ವಾಸ ಮಾಡುತ್ತಿದ್ದಾರೆ. ನಾವು ಸಾಲದ ಹಣ ತೀರಿಸುತ್ತೇವೆ ಸಮಯ ಕೊಡಿ ಎಂದು ಮನವಿ ಮಾಡಿದ್ದಾರೆ. ಫೈನಾನ್ಸ್ ಕಂಪನಿ ಸಿಬ್ಬಂದಿ ಅಮಾನವೀಯ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular